ನವದೆಹಲಿ: ಶಾಸಕಾಂಗ ಪಕ್ಷದ ಸಭೆಗೆ ಅರ್ಧದಷ್ಟು ಶಾಸಕರು ಬಾರದ ಹಿನ್ನೆಲೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಬಿಕ್ಕಟ್ಟು ಎದುರಿಸುತ್ತಿದೆ. ಪಕ್ಷಾಂತರದ ಆತಂಕಕ್ಕೀಡಾಗಿದೆ.

ಸಮಸ್ಯೆ ಪರಿಹಾರಕ್ಕಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರನ್ನು ಕಾಂಗ್ರೆಸ್ ಗೋವಾಕ್ಕೆ ಕಳುಹಿಸಿದೆ.

ಪಕ್ಷದ ಈ ಪರಿಸ್ಥಿತಿಗೆ ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಮತ್ತು ಶಾಸಕಾಂಗ ಪಕ್ಷದ ನಾಯಕ ಮೈಕಲ್ ಲೋಬೊ ಅವರೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಹೈಕಮಾಂಡ್‌ಗೆ ವರದಿ ಸಲ್ಲಿಸಲು ಮೋಹನ್ ಪ್ರಕಾಶ್ ಅವರನ್ನು ಕಾಂಗ್ರೆಸ್ ಮಹಾರಾಷ್ಟ್ರಕ್ಕೆ ಕಳುಹಿಸಿದ ಬೆನ್ನಲ್ಲೇ ಈ ಬೆಳವಣಿಗೆಯೂ ನಡೆದಿದೆ.

ಜುಲೈ 4 ರಂದು ಶಿಂಧೆ ಸರ್ಕಾರದ ವಿಶ್ವಾಸಮತದ ವೇಳೆ ಗೈರುಹಾಜರಾದ ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಸೇರಿದಂತೆ 11 ಜನರ ವಿರುದ್ಧ ಹಾಗೂ ಎಂಎಲ್‌ಸಿ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಶಾಸಕರ ವಿರುದ್ಧ ಶಿಸ್ತು ಕ್ರಮಕ್ಕೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಾಟೋಲೆ ಕೋರಿದ್ದರು.

ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಚಂದ್ರಕಾಂತ್ ಹಂದೋರೆ ಅವರಿಗೆ ಬೇಕಿದ್ದ 26 ಮತಗಳಿಗೆ ಪ್ರತಿಯಾಗಿ 29 ಮತಗಳನ್ನು ನಿಗದಿಗೊಳಿಸಲಾಗಿತ್ತು. ಆದರೂ, ಕೇವಲ 22 ಮತಗಳಷ್ಟೇ ಬಂದಿದ್ದವು. ಹೀಗೆ ಆಗಲು ಹೇಗೆ ಸಾಧ್ಯ ಎಂದು ಮುಂಬೈ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರಿಫ್ ನಸೀಮ್ ಖಾನ್ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದರು.

ಇದಕ್ಕೂ ಮೊದಲು, ಏಳು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಪೃಥ್ವಿರಾಜ್ ಚವ್ಹಾಣ್, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆಯಲ್ಲಿ ಒಂದೆಡೆ ಕಾಂಗ್ರೆಸ್ ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಸೋತರೆ, ಇನ್ನೊಂದಡೆ ಮಹಾವಿಕಾಸ ಆಘಾಡಿ ಸರ್ಕಾರವೇ ಪತನವಾಗಿತ್ತು.

ಜೂನ್ 30 ರಂದು ಬಿಜೆಪಿ ಬೆಂಬಲಿತ ಶಿಂಧೆ-ದೇವೇಂದ್ರ ಫಡ್ನವಿಸ್ ಸರ್ಕಾರ ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.