ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಿ: ಸುಚರಿತಾ ಟಿಕೆಟ್ ನಿರಾಕರಣೆ, ನಾರಾಯಣ್ ಪಟ್ನಾಯಕ್‌ ‘ಕೈ’ ಅಭ್ಯರ್ಥಿ

Published 5 ಮೇ 2024, 4:50 IST
Last Updated 5 ಮೇ 2024, 4:50 IST
ಅಕ್ಷರ ಗಾತ್ರ

ಭುವನೇಶ್ವರ: ಸುಚರಿತಾ ಮೊಹಂತಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ಅನ್ನು ವಾಪಸ್‌ ನೀಡಿದ ಬೆನ್ನಲ್ಲೇ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಯ ನಾರಾಯಣ್ ಪಟ್ನಾಯಕ್ ಅವರನ್ನು ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಚುನಾವಣಾ ಪ್ರಚಾರದ ಖರ್ಚಿಗೆ ಪಕ್ಷದ ನಿಧಿಯಿಂದ ಹಣ ನೀಡಲು ಪಕ್ಷ ನಿರಾಕರಿಸಿದೆ ಎಂದು ಆರೋಪಿಸಿ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಸುಚರಿತಾ ಮೊಹಂತಿ ಅವರು ಸ್ಪರ್ಧಿಸಲು ನಿರಾಕರಿಸಿ, ಪಕ್ಷದ ಟಿಕೆಟ್‌ ಅನ್ನು ವಾಪಸ್‌ ಮಾಡಿದ್ದರು.

ಮೊಹಂತಿ ಅವರ ಬದಲಿಗೆ ಪಟ್ನಾಯಕ್‌ ಅವರ ಉಮೇದುವಾರಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಹೊರಡಿಸಿರುವ ಹೇಳಿಕೆ ತಿಳಿಸಿದೆ.

‘ಹಣದ ಕೊರತೆಯಿಂದಾಗಿ ಪ್ರಚಾರ ನಡೆಸಲು ಆಗುತ್ತಿಲ್ಲ. ಪಕ್ಷದ ನಿಧಿಯಿಂದ ಹಣ ಬರದಿದ್ದರೆ ಪುರಿಯಲ್ಲಿ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ಹೇಳುವುದಕ್ಕೆ ನಾನು ವಿಷಾದಿಸುತ್ತೇನೆ. ಆದ್ದರಿಂದ ಪುರಿ ಲೋಕಸಭಾ ಕ್ಷೇತ್ರದ ಪಕ್ಷದ ಟಿಕೆಟ್‌ಅನ್ನು ವಾಪಸ್‌ ಮಾಡುತ್ತೇನೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತಳಾಗಿ ಮುಂದುವರಿತ್ತೇನೆ’ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ಬರೆದ ಪತ್ರದಲ್ಲಿ ಮೊಹಂತಿ ತಿಳಿಸಿದ್ದರು.

ಪುರಿ ಕ್ಷೇತ್ರದಲ್ಲಿ ಮೇ 25ರಂದು ಮತದಾನ ನಡೆಯಲಿದೆ. ಇಲ್ಲಿ ಬಿಜೆಪಿಯ ಸಂಬಿತ್‌ ಪಾತ್ರ ಮತ್ತು ಬಿಜೆಡಿಯ ಅರೂಪ್‌ ಪಟ್ನಾಯಕ್‌ ಅವರು ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT