ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ ಸ್ಪೀಕರ್‌ ಆಗಿ ನಾನಾ ಪಟೋಲೆ ಅವಿರೋಧ ಆಯ್ಕೆ

Last Updated 1 ಡಿಸೆಂಬರ್ 2019, 5:06 IST
ಅಕ್ಷರ ಗಾತ್ರ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದ ನಾನಾ ಪಟೋಲೆ ಅವರು ಮಹಾರಾಷ್ಟ್ರದ ಸ್ಪೀಕರ್‌ ಆಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಕಿಸಾನ್‌ ಕಠೋರೆ ನಾಮನಿರ್ದೇಶನಗೊಂಡಿದ್ದರು. ಆದರೆ, ಭಾನುವಾ ಬೆಳಿಕ್ಕೆ ಪಕ್ಷ ತನ್ನ ಅಭ್ಯರ್ಥಿಯನ್ನು ಹಿಂಪಡೆದಿದ್ದರಿಂದ ಪಟೋಲೆ ಅವಿರೋಧವಾಗಿ ಆಯ್ಕೆಯಾದರು.

‘ಸ್ಪೀಕರ್ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಭ್ಯರ್ಥಿಯನ್ನು ಘೋಷಿಸಿತ್ತು. ಬೇರೆ ಶಾಸಕರ ಮನವಿ ಮೇರೆಗೆ ಹಾಗೂ ಶಾಸನ ಸಭೆಯ ಗೌರವನ್ನು ಕಾಪಾಡುವ ದೃಷ್ಟಿಯಿಂದ ತನ್ನ ಅಭ್ಯರ್ಥಿಯನ್ನು ಹಿಂಪಡೆದಿದೆ. ಈಗ ಸ್ಪೀಕರ್‌ ಆಯ್ಕೆ ಅವಿರೋಧವಾಗಿ ನಡೆಯುತ್ತದೆ’ ಎಂದು ಎನ್‌ಸಿಪಿ ಮುಖಂಡ ಚಗನ್‌ ಭುಜಬಲ್‌ ತಿಳಿಸಿದರು.

ಮಹಾರಾಷ್ಟ್ರ ಪೂರ್ವಭಾಗದ ವಿದರ್ಭಾ ಪ್ರದೇಶದವರಾದ 56 ವರ್ಷದ ಪಟೋಲೆ ಹಿಂದುಳಿದ ಕುಣಬಿ ಸಮುದಾಯದ ಕೃಷಿ ಕುಟುಂಬದಿಂದ ಬಂದವರು. ಪಕ್ಷೇತರರಾಗಿದ್ದ ಅವರು 2014ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು. ಆ ಚುನಾವಣೆಯಲ್ಲಿ ಭಂಡಾರ-ಗೋಂಡಿಯಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್​ನಲ್ಲಿ ಸ್ಪರ್ಧಿಸಿದ್ದ ಅವರು ಎನ್‌ಸಿಪಿಯ ಪ್ರಫುಲ್ ಪಟೇಲ್ ಅವರನ್ನ ಸೋಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT