ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ | ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್: ಸಿ.ಪಿ ಜೋಶಿ

Published 13 ಜನವರಿ 2024, 11:42 IST
Last Updated 13 ಜನವರಿ 2024, 11:42 IST
ಅಕ್ಷರ ಗಾತ್ರ

ಜೈಪುರ: ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿರುವುದು ಕಾಂಗ್ರೆಸ್‌ನ ತುಷ್ಟೀಕರಣ ನೀತಿಗೆ ಕಾರಣವಾಗಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸಿ. ಪಿ ಜೋಶಿ ಆರೋಪಿಸಿದ್ದಾರೆ.

ರಾಮ ದೇವರ ಕುರಿತು ಕಾಂಗ್ರೆಸ್‌ಗೆ ಏಕೆ ಸಮಸ್ಯೆ ಎಂದು ಅವರು ಪ್ರಶ್ನಿಸಿದರು. ರಾಮ ಹುಟ್ಟಲೇ ಇಲ್ಲ, ಅದೊಂದು ಕಾಲ್ಪನಿಕ ಪಾತ್ರ ಎಂದು ಹೇಳಿತ್ತು. ಅಲ್ಲದೆ, ಸನಾತನ ಧರ್ಮವನ್ನು ಡೆಂಗಿ, ಮಲೇರಿಯಾ ಹಾಗೂ ಏಡ್ಸ್‌ಗೆ ಹೋಲಿಸಿದೆ ಎಂದು ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನು ದೇಶ ಮತ್ತು ಪ್ರಪಂಚದ ಲಕ್ಷಾಂತರ ಜನರ ನಂಬಿಕೆಯ ಸಂಕೇತವಾಗಿದೆ. ಈ ಕಾರ್ಯಕ್ರಮವನ್ನು ವಿರೋಧಿಸುತ್ತಿರುವುದು ಕಾಂಗ್ರೆಸ್‌ನ ತುಷ್ಟೀಕರಣ ನೀತಿಗೆ ಕಾರಣವಾಗಿದೆ ಎಂಬುದನ್ನು ತೋರಿಸುತ್ತದೆ’ ಎಂದು ತಿಳಿಸಿದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್‌ ನಿರಾಕರಿಸಿದ್ದು, ಇದನ್ನು ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT