ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಕಳೆದುಕೊಳ್ಳುವ ಆತಂಕ?

Published 28 ಫೆಬ್ರುವರಿ 2024, 13:28 IST
Last Updated 28 ಫೆಬ್ರುವರಿ 2024, 13:28 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ‍ಪ್ರದೇಶದಲ್ಲಿ ಸ್ಪಷ್ಟ ಬಹುಮತ ಪಡೆದು ಕಳೆದ ಎರಡು ವರ್ಷಗಳ ಹಿಂದೆ ಸರ್ಕಾರ ರಚನೆ ಮಾಡಿದ್ದ ಕಾಂಗ್ರೆಸ್‌ ಪಕ್ಷ ಇದೀಗ ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದೆ. 

ಮಂಗಳವಾರ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟವಾದ ಬಹುಮತವಿದ್ದರೂ ಅಭಿಷೇಕ್‌ ಮನು ಸಿಂಘ್ವಿ ಅವರನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ 6 ಶಾಸಕರು ಬಿಜೆಪಿಗೆ ಅಡ್ಡಮತದಾನ ಮಾಡಿದ್ದರಿಂದ ಬಿಜೆಪಿಯ ಹರ್ಷ ಮಹಾಜನ್‌ ಗೆಲುವು ಸಾಧಿಸಿದರು.

ಈ ಘಟನೆಯಿಂದಾಗಿ ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಸ್ವಪಕ್ಷದ 6 ಶಾಸಕರು ಬಿಜೆಪಿ ಪಾಳೆಯದಲ್ಲಿ ಗುರುತಿಸಿಕೊಂಡಿರುವುದರಿಂದ ಬಹುಮತದ ಸಮಸ್ಯೆ ಎದುರಾಗಿದೆ. 

ಹಿಮಾಚಲ ಪ್ರದೇಶ ವಿಧಾನಸಭೆಯು 68 ಸ್ಥಾನಗಳ ಬಲಾಬಲವನ್ನು ಹೊಂದಿದೆ. ಇಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನು ಗೆದ್ದುಕೊಂಡು ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಬಿಜೆಪಿ 25 ಸ್ಥಾನಗಳು, ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದರು. 

ಇದೀಗ ಕಾಂಗ್ರೆಸ್‌ನ 6 ಶಾಸಕರು ಬಿಜೆಪಿ ಜೊತೆ ಗುರುತಿಸಿಕೊಂಡಿರುವುದರಿಂದ ಕಾಂಗ್ರೆಸ್‌ 34 ಸ್ಥಾನಗಳಿಗೆ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT