ನವದೆಹಲಿ: ಪಕ್ಷದ ನಾಯಕ ಪವನ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿರುವ ಗುವಾಹಟಿ ನ್ಯಾಯಾಲಯದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗುವುದು ಎಂದು ಕಾಂಗ್ರೆಸ್ ಶನಿವಾರ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಅವರು, ‘ಬೆದರಿಕೆ, ಕಿರುಕುಳದ ರಾಜಕೀಯದ ವಿರುದ್ಧ ನ್ಯಾಯ ಲಭಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

‘ಪವನ್ ಖೇರಾ ಪರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಲ್ಲಲಿದೆ’ ಎಂದು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ಹಲವು ಪಾಸ್ಪೋರ್ಟ್ ಮತ್ತು ವಿದೇಶದಲ್ಲಿ ಆಸ್ತಿ ಹೊಂದಿದ್ದಾರೆ ಎಂದು ಖೇರಾ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ನ್ಯಾಯಾಲಯವು ತಿರಸ್ಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.