ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ಕಾಂಗ್ರೆಸ್ ಮಹಾ ಮೋರ್ಚಾ ನಾಳೆ

Published 10 ಡಿಸೆಂಬರ್ 2023, 12:58 IST
Last Updated 10 ಡಿಸೆಂಬರ್ 2023, 12:58 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿರುವ ನಾಗ್ಪುರದ ವಿಧಾನ ಭವನದ ಆವರಣದಲ್ಲಿ ಕಾಂಗ್ರೆಸ್ ಸೋಮವಾರ ಬೃಹತ್ ಪ್ರತಿಭಟನೆ ಕೈಗೊಳ್ಳಲು ನಿರ್ಧರಿಸಿದೆ.

ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಬಿಜೆಪಿ, ಶಿವಸೇನಾ ಮತ್ತು ಎನ್‌ಸಿಪಿ ಮೈತ್ರಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಉದ್ದೇಶದೊಂದಿಗೆ ನಡೆಯಲಿರುವ ಈ ಬೃಹತ್ ಮೋರ್ಚಾದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ಮುಖಂಡರು ಭಾಗವಹಿಸಲಿದ್ದಾರೆ. 

ಚಳಿಗಾಲದ ಅಧಿವೇಶನ ಆರಂಭವಾಗಿ ಇಷ್ಟು ದಿನಗಳಾದರೂ, ರಾಜ್ಯ ಸರ್ಕಾರವು ಈವರೆಗೆ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿಲ್ಲ. ಮುಖ್ಯಮಂತ್ರಿ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು, ರೈತರಿಗೆ ಸಾಕಷ್ಟು ಪರಿಹಾರ ನೀಡಲಾಗಿದೆ ಎಂದು ಕೇವಲ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ರೈತರು ಭಾರಿ ಪ್ರಮಾಣದ ನಷ್ಟಕ್ಕೆ ಒಳಗಾಗಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT