ಶ್ರಿನಗರ: ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ತಮ್ಮ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರುಚ್ಚರಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಜಮ್ಮು ಮತ್ತು ಕಾಶ್ಮೀರದ ಜನರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರತಿಜ್ಞೆ ಮಾಡುತ್ತದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಕಾಂಗ್ರೆಸ್ ಪಕ್ಷ ನೀಡಿದ ಏಳು ಗ್ಯಾರಂಟಿ ಯೋಜನೆಗಳು ಈ ಪ್ರದೇಶದ ಜನರ ಉಜ್ವಲ ಭವಿಷ್ಯವನ್ನು ರೂಪಿಸುವ ಗುರಿಯನ್ನು ಹೊಂದಿವೆ' ಎಂದು ಹೇಳಿದ್ದಾರೆ.
ಪಕ್ಷದ (ಕಾಂಗ್ರೆಸ್) ಏಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಿಸುವ ವಿಡಿಯೊವನ್ನು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಗ್ಯಾರಂಟಿ ಯೋಜನೆಗಳು ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಬಲೀಕರಣ ಸಾಧಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಉಜ್ವಲ ಭವಿಷ್ಯವನ್ನು ರೂಪಿಸುತ್ತವೆ ಎಂದು ಅವರು ಹೇಳಿದ್ದಾರೆ.
ಮೊದಲನೆಯದಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವ ಸ್ಥಾನಮಾನ ಮರುಸ್ಥಾಪಿವುದಾಗಿ ಹೇಳಿದೆ.
ಪ್ರತಿ ಕುಟುಂಬಕ್ಕೆ ₹25 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಮತ್ತು ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವುದಾಗಿ ಭರವಸೆ ನೀಡಿದೆ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಕಾಶ್ಮೀರಿ ಪಂಡಿತರ ಪುನರ್ವಸತಿ ಯೋಜನೆಯ ಅನುಷ್ಠಾನ ಮತ್ತು ಒಬಿಸಿ ಸಮುದಾಯಕ್ಕೆ ಸಂವಿಧಾನ ಆಧಾರಿತ ಹಕ್ಕುಗಳನ್ನು ಖಾತರಿಪಡಿಸುವುದಾಗಿ ಹೇಳಿದೆ.
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹3,000 ಆರ್ಥಿಕ ಸಹಾಯಧನ ಮತ್ತು ಆಹಾರ ಭದ್ರತೆಗಾಗಿ ಪ್ರತಿ ಕುಟುಂಬದ ಸದಸ್ಯರಿಗೆ 11 ಕೆ.ಜಿ ಧಾನ್ಯ ನೀಡುವುದಾಗಿದೆ ಹೇಳಿದೆ.
ಬೆಳೆ ವಿಮೆ ಜೊತೆಗೆ ಸೇಬುಗೆ (1 ಕೆ.ಜಿ) ₹72 ಕನಿಷ್ಠ ಬೆಂಬಲ ಬೆಲೆ (MSP) ನೀಡುವುದಾಗಿ ಘೋಷಿಸಿದೆ.
ಭೂರಹಿತರು, ಹಿಡುವಳಿದಾರರು ಮತ್ತು ರೈತ ಕುಟುಂಬಗಳಿಗೆ ವರ್ಷಕ್ಕೆ ₹4,000 ಆರ್ಥಿಕ ಸಹಾಯಧನ ಹಾಗೂ ಅರ್ಹ ಯುವಕರಿಗೆ ಒಂದು ವರ್ಷದವರೆಗೆ ತಿಂಗಳಿಗೆ ₹3,500 ನಿರುದ್ಯೋಗ ಭತ್ಯೆ ನೀಡುವುದಾಗಿದೆ ತಿಳಿಸಿದೆ.
ಅಲ್ಲದೇ ಖಾಲಿ ಇರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದೂ ಹೇಳಿದೆ.
The Indian National Congress pledges to safeguard the Constitutional Rights of the people of Jammu and Kashmir.
— Mallikarjun Kharge (@kharge) September 22, 2024
Our progressive development agenda is for everyone.
The 7 guarantees of the Congress party for Jammu and Kashmir will usher in a brighter future, which focusses on… pic.twitter.com/6a2sRK6jB0
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.