ನವದೆಹಲಿ: ಎ.ಐ ಶೃಂಗಸಭೆಯಲ್ಲಿ ಅಂಗಿ ತೆಗೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ನ ಮೂವರು ಮುಖಂಡರನ್ನು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರ ಯಾದವ್, ರಾಜ್ ಗುಜ್ಜರ್ ಮತ್ತು ಅಜಯ್ ಕುಮಾರ್ ಅವರನ್ನು ಬಂಧಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಐವೈಸಿಯ (ಭಾರತೀಯ ಯುವ ಕಾಂಗ್ರೆಸ್) ಪ್ರಧಾನ ಕಾರ್ಯದರ್ಶಿ ಲಲಿತ್ಪುರದ ರಿತಿಕ್ ಅಲಿಯಾಸ್ ಮಾಂಟಿ ಶುಕ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಐವೈಸಿ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ವಿಚಾರಣೆ ನಡೆಸಿದ್ದಾರೆ.

ಗುಂಪುಗಳ ನಡುವೆ ದ್ವೇಷ ಬಿತ್ತಿದ ಹಾಗೂ ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತಂದ ಆರೋಪಗಳನ್ನು ಇವರ ವಿರುದ್ಧ ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.