ಶಿರಾಳಕೊಪ್ಪ (ಶಿಕಾರಿಪುರ): ‘ಚುನಾವಣೆ ಪೂರ್ವದಲ್ಲಿ ವಿಶ್ವದ ಸುಭದ್ರ ಸರ್ಕಾರ; ಚುನಾವಣೆ ನಂತರ ಸಂಕಷ್ಟದಲ್ಲಿರುವ ಸರ್ಕಾರ. ಹೀಗೆ ದ್ವಂದ್ವ ಹೇಳಿಕೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿ ಹೆಸರಿನಲ್ಲಿ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ’ ಎಂದು ಕೆಡಿಪಿ ಸದಸ್ಯ ರಾಘವೇಂದ್ರ ನಾಯ್ಕ ಹೇಳಿದರು.

ಪಟ್ಟಣದ ನಾಡ ಕಚೇರಿ ಎದುರು ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಪೆಟ್ರೋಲಿಯಂ ಉತ್ಪನ್ನ ದರ ಹೆಚ್ಚಳ, ವಾಣಿಜ್ಯ ಸಿಲಿಂಡರ್ ಹೆಚ್ಚಳ ಪರಿಣಾಮ ಆಹಾರ ಪದಾರ್ಥ ಸೇರಿ ಎಲ್ಲ ಬಗೆಯ ವಸ್ತುಗಳ ದರ ಹೆಚ್ಚಳವಾಗಿದ್ದು, ಜನ ಸಂಕಷ್ಟ ಎದುರಿಸುವಂತಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣದಿಂದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದು ಕೇಂದ್ರದ ಶಿಕ್ಷಣ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಜನರು ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದು ತಿಳಿಸಿದರು.

‘ನೀಟ್ ವ್ಯವಸ್ಥೆ ರದ್ದುಪಡಿಸಿ ರಾಜ್ಯ ಸರ್ಕಾರಗಳೇ ವೈದ್ಯಕೀಯ, ಎಂಜಿನಿಯರಿಂಗ್ ಸೀಟ್ ಆಯ್ಕೆಗೆ ಅವಕಾಶ ನೀಡಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರ ಬೇಷರತ್ ಕ್ಷಮೆ ಯಾಚಿಸಬೇಕು. ವರ್ಷಪೂರ್ತಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಪರೀಕ್ಷಾ ವ್ಯವಸ್ಥೆ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುವ ಪ್ರವೃತ್ತಿಗೆ ಯುವಜನರು ತಕ್ಕಪಾಠ ಕಲಿಸಬೇಕು’ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸದ್ದು ಬಳ್ಳಿಗಾವಿ ಹೇಳಿದರು.

‘2016ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತು. ಆಗಲೂ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿತ್ತು’ ಎಂದು ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಂಜ್ಯಾನಾಯ್ಕ ಆರೋಪಿಸಿದರು.

ಪ್ರತಿಭಟನೆ ನಂತರ ನಾಡಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಪಟ್ಟಣ ಘಟಕದ ಅಧ್ಯಕ್ಷ ನಯಾಜ್ ಅಹ್ಮದ್, ಕರಿಬಸಪ್ಪ ಬಳ್ಳಿಗಾವಿ, ಭಾಷಾಸಾಬ್, ಸಾಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತನಾಯ್ಕ, ರಾಜಾಸಾಬ್, ಸಾಜಿದ್ಅಲಿ, ಸಮೀರ್, ಸೂಫಿಯಾನ್, ಯುವರಾಜ್ ನಾಯ್ಕ, ಜಬಿ, ತಾಹ, ಸಫೀರ್ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-1481441272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.