ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮದ ಆಧಾರದಲ್ಲಿ ಕಾಂಗ್ರೆಸ್ ಮೀಸಲಾತಿ ನೀಡಿಲ್ಲ: ಜೈರಾಮ್ ರಮೇಶ್

Published 19 ಮೇ 2024, 15:56 IST
Last Updated 19 ಮೇ 2024, 15:56 IST
ಅಕ್ಷರ ಗಾತ್ರ

ಪಟ್ನಾ: ಅಲ್ಪಸಂಖ್ಯಾತ ಸಮುದಾಯಗಳ ಕೆಲವು ವರ್ಗಗಳಿಗೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಆದರೆ, ಅದು ಧರ್ಮದ ಆಧಾರದಲ್ಲಿ ಅಲ್ಲ, ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆಯ ಆಧಾರದಲ್ಲಿ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಭಾನುವಾರ ಪ್ರತಿಪಾದಿಸಿದರು.

ಸದಾಕತ್ ಆಶ್ರಮದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಕರ್ನಾಟಕದಂಥ ರಾಜ್ಯಗಳಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ಕಲ್ಪಿಸಿಲ್ಲ’ ಎಂದು ಸ್ಪಷ್ಟಪಡಿಸಿದರು. ಆದರೆ, ‘ಬಿಜೆಪಿಯು ಧರ್ಮದ ಆಧಾರದಲ್ಲಿ ಪೌರತ್ವ ಕಲ್ಪಿಸುವ ಸಿಎಎ ಜಾರಿ ಮಾಡುವ ಮೂಲಕ ಸಂವಿಧಾನವನ್ನು ಉಲ್ಲಂಘಿಸಿದೆ. ಹಾಗಾಗಿ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ’ ಎಂದು ತಿಳಿಸಿದರು. 

‘ಬಾಬಾ ಸಾಹೇಬರು ಬರೆದ ಸಂವಿಧಾನವನ್ನು ವಿರೋಧಿಸಿ ಆರ್‌ಎಸ್‌ಎಸ್‌ ಮುಖವಾಣಿಯಲ್ಲಿ ಲೇಖನವೊಂದನ್ನು ಪ್ರಕಟಿಸಲಾಗಿತ್ತು. ಅದರಲ್ಲಿ ‘ಮನುವಾದಿ ಸಂವಿಧಾನ’ದ ಪರವಾಗಿ ವಕಾಲತ್ತು ವಹಿಸಲಾಗಿತ್ತು’ ಎಂದು ಹೇಳಿದರು.

‘ಮೋದಿ ಅವರು ನಿಂತ ನೆಲವು ಕುಸಿಯುತ್ತಿದ್ದು, ತಾವು ನಿರ್ಗಮಿಸಲಿರುವ ಪ್ರಧಾನಿ ಎನ್ನುವುದು ಖಚಿತವಾಗಿ ಅವರು ಹತಾಶೆಗೊಳಗಾಗಿದ್ದಾರೆ. ನಿಜವಾದ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT