ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಭ್ರಷ್ಟಾಚಾರದ ಅಂಗಡಿಗಳನ್ನು ಮುಚ್ಚಲು ಕಠಿಣ ಕ್ರಮ: ಕಿರಣ್‌ ರಿಜಿಜು

Published 12 ಡಿಸೆಂಬರ್ 2023, 10:48 IST
Last Updated 12 ಡಿಸೆಂಬರ್ 2023, 10:48 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಭ್ರಷ್ಟಾಚಾರದ ವಿರುದ್ಧ ಕೈಗೊಂಡಿರುವ ಕಠಿಣ ಕ್ರಮದ ಸಂಕಲ್ಪವೇ ವಿರೋಧ ಪಕ್ಷದ ನಾಯಕರು ಒಂದಾಗಲು ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು ‘ಇಂಡಿಯಾ’ ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರ್ಖಂಡ್‌ನ ಕಾಂಗ್ರೆಸ್‌ ಸಂಸದ ಧೀರಜ್‌ ಪ್ರಸಾದ್‌ ಸಾಹು ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆಯು ಸುಮಾರು ₹351 ಕೋಟಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿದೆ. ಬಿಹಾರ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ದೆಹಲಿಯಲ್ಲಿರುವ ವಿರೋಧ ಪಕ್ಷಗಳ ನಾಯಕರ ವಿರುದ್ಧವೂ ಪ್ರಕರಣಗಳಿವೆ ಎಂದು ಅವರು ಹೇಳಿದರು.

‘ಕಾಂಗ್ರೆಸ್‌ ತೆರೆದಿರುವ ಹಲವು ಭ್ರಷ್ಟಾಚಾರದ ಅಂಗಡಿಗಳನ್ನು ಮುಚ್ಚಬೇಕಾಗಿದೆ. ಅದಕ್ಕಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇಂಡಿಯಾ ಒಕ್ಕೂಟದ ಒಗ್ಗೂಡುವಿಕೆಯು ಪ್ರಜಾಪ್ರಭುತ್ವದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅದು ಭ್ರಷ್ಟರಿಂದ, ಭ್ರಷ್ಟರ ಒಳಿತಿಗಾಗಿ ನಿರ್ಮಾಣಗೊಂಡಿರುವ ಭ್ರಷ್ಟರ ಒಕ್ಕೂಟವಾಗಿದೆ‘ ಎಂದು ರಿಜಿಜು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಭ್ರಷ್ಟಾಚಾರದ ಮೂಲವಾಗಿದ್ದು, ಅದನ್ನು ಭ್ರಷ್ಟಾಚಾರದ ಪಕ್ಷ ಎಂದು ಕರೆಯಬೇಕು. ಕಾಂಗ್ರೆಸ್‌ ನಾಯಕರು ಭ್ರಷ್ಟ ಆಚರಣೆಗಳಲ್ಲಿ ತೊಡಗುವುದಲ್ಲದೆ, ಇತರರನ್ನು ಪ್ರೋತ್ಸಾಹಿಸುತ್ತಾರೆ. ಲೂಟಿ ಮಾಡುವುದು ಹಾಗೂ ಇತರರನ್ನು ಲೂಟಿ ಮಾಡಲು ಬಿಡುವುದು ಕಾಂಗ್ರೆಸ್‌ನ ನೀತಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ಮತ್ತು ಸರ್ಕಾರದ ಪ್ರಯೋಜನಗಳನ್ನು ಸಾರ್ವಜನಿಕರಿಗೆ ತಲುಪುವಂತೆ ಮಾಡಲು ನರೇಂದ್ರ ಮೋದಿ ಅವರು ಜನರಿಗೆ ಹಲವು ಭರವಸೆಗಳನ್ನು ನೀಡಿದ್ದಾರೆ. ಇದರೊಂದಿಗೆ ಪ್ರತಿಯೊಬ್ಬ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುವುದು ಮೋದಿ ಅವರ ಇನ್ನೊಂದು ಗ್ಯಾರಂಟಿ ಆಗಿದೆ. ಆದ್ದರಿಂದಲೇ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಅವರ ಸ್ನೇಹಿತರು ಮೋದಿಯವರನ್ನು ತುಂಬಾ ದ್ವೇಷಿಸುತ್ತಾರೆ ಎಂದು ರಿಜಿಜು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT