ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ ಎಂದು ಕಾಂಗ್ರೆಸ್ ಶುಕ್ರವಾರ ಆರೋಪಿಸಿದೆ.

ಕಳೆದ 12 ವರ್ಷಗಳಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಏಳು ವಿಭಿನ್ನ ಹಂತಗಳಲ್ಲಿ ಕುಸಿದಿದ್ದರೂ ದೇಶದಲ್ಲಿ ಅದರ ಪ್ರಯೋಜನ ಗ್ರಾಹಕರಿಗೆ ತಲುಪಿರಲಿಲ್ಲ ಎಂದು ಬೊಟ್ಟು ಮಾಡಿದೆ.

ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ ₹3ಕ್ಕೆ ಇಳಿಸಿ ಹಾಗೂ ಡೀಸೆಲ್ಗೆ ಸುಂಕದಿಂದ ವಿನಾಯಿತಿ ನೀಡಲಾಗಿತ್ತು.

ಈಗಿನ ಘೋಷಣೆಯು ಚುನಾವಣೆಗಷ್ಟೇ ಸೀಮಿತ. ಏಪ್ರಿಲ್ 30ರವರೆಗೆ ಕಾಯಿರಿ ಎಂದು ಕಾಂಗ್ರೆಸ್ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರ್ ಹೇಳಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ಇಳಿಮುಖವಾಗುತ್ತಿವೆ ಎಂದು ಅಂದುಕೊಂಡರೆ ಅದು ತಪ್ಪು ಕಲ್ಪನೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಹಾಗೂ 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ಮೇ 4ರಂದು ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
.ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆತಂಕದ ನಡುವೆ ಗುಡ್ ನ್ಯೂಸ್ ನೀಡಿದ ಸರ್ಕಾರ.Video: ಪೆಟ್ರೋಲ್ ತುಂಬಿಕೊಳ್ಳಲು ಬಂಕ್ಗೆ ಬಂದವು ಕುಕ್ಕರ್, ಬಕೆಟ್!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.