ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.22ರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಲಿ: ಶಿವಸೇನಾ

Published 3 ಜನವರಿ 2024, 15:46 IST
Last Updated 3 ಜನವರಿ 2024, 15:46 IST
ಅಕ್ಷರ ಗಾತ್ರ

ಮುಂಬೈ: ವಿಶೇಷ ಆಹ್ವಾನ ದೊರಕಿದರೆ, ಕಾಂಗ್ರೆಸ್‌ ನಾಯಕರು ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಸೇನಾ (ಯುಬಿಟಿ) ಹೇಳಿದೆ.

ಬಾಬರಿ ಮಸೀದಿ ಧ್ವಂಸವಾದ ಸಂದರ್ಭದಲ್ಲಿ ಬಿಜೆಪಿ ನಾಯಕರೇನಾದರೂ ಪ್ರಧಾನಿ ಆಗಿದ್ದರೆ ಅವರು ಮಸೀದಿ ಕೆಡವಲು ಅವಕಾಶ ನೀಡುತ್ತಿರಲಿಲ್ಲ ಎಂದು ಪಕ್ಷದ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಪಕ್ಷವು ಬಿಜೆಪಿಯನ್ನು ಕೆಣಕಿದೆ.

‘ಜ. 22ರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕಾಂಗ್ರೆಸ್‌ಗೆ ವಿಶೇಷ ಆಹ್ವಾನ ಬಂದರೆ ಪಕ್ಷದ ನಾಯಕರು ಅಯೋಧ್ಯೆಗೆ ಹೋಗಬೇಕು. ಅದರಲ್ಲಿ ತಪ್ಪೇನಿದೆ? ಕಾಂಗ್ರೆಸ್‌ನ ಆತ್ಮ ಹಿಂದೂ. ಅದರಲ್ಲಿ ಮುಚ್ಚಿಡುವಂಥದ್ದೇನೂ ಇಲ್ಲ. ಹಿಂದೂ ಸಂಸ್ಕೃತಿಯ ಬೆಳವಣಿಗೆಗೆ ಕಾಂಗ್ರೆಸ್‌ ಕೊಡುಗೆಯೂ ಇದೆ’ ಎಂದು ಸಂಪಾದಕೀಯ ತಿಳಿಸಿದೆ.

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಎಂದಿಗೂ ವಿರೋಧಿಸಿರಲಿಲ್ಲ. ಅಲ್ಲಿ ರಾಮಮಂದಿರ ನಿರ್ಮಾಣವಾಗ ಬೇಕೆಂದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅಭಿಪ್ರಾಯ ಪಟ್ಟಿದ್ದರು. ಅವರ ಸೂಚನೆಯ ಮೇರೆಗೆ ದೂರದರ್ಶನದಲ್ಲಿ ‘ರಾಮಾಯಣ’ ಧಾರಾವಾಹಿ ಪ್ರಸಾರವಾಗಿತ್ತು’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT