ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌-ಎಸ್‌ಪಿ ಮೈತ್ರಿ ಉತ್ತಮ ಬೆಳವಣಿಗೆ: ಅಖಿಲೇಶ್‌

Published 27 ಜನವರಿ 2024, 9:47 IST
Last Updated 27 ಜನವರಿ 2024, 9:47 IST
ಅಕ್ಷರ ಗಾತ್ರ

ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಶನಿವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅಖಿಲೇಶ್‌, ರಾಜ್ಯದ 11 ಪ್ರಮುಖ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನೊಂದಿಗಿನ ಸಮಾಜವಾದಿ ಪಕ್ಷದ ಮೈತ್ರಿಯು ಉತ್ತಮ ಬೆಳವಣಿಗೆಯಾಗಿದೆ. ಈ ಮೂಲಕ ಗೆಲುವು ಸಾಧಿಸಲು ಅನುಕೂಲವಾಗಲಿದೆ. ಇಂಡಿಯಾ ಮೈತ್ರಿಕೂಟದ ಕಾರ್ಯತಂತ್ರವು ದೇಶದಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶವು ಒಟ್ಟು 80 ಸಂಸದರ ಬಲ ಹೊಂದಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮಹಾಘಟಬಂಧನ್‌ನಲ್ಲಿಯೇ ಮುಂದುವರಿಯುತ್ತಾರೋ ಅಥವಾ ಅದನ್ನು ತ್ಯಜಿಸಿ, ಬಿಜೆಪಿಯೊಂದಿಗೆ ಕೈ ಜೋಡಿಸಿ ಅಧಿಕಾರದಲ್ಲಿ ಉಳಿಯುತ್ತಾರೋ ಎಂಬ ಕುತೂಹಲ ಮುಂದುವರಿದಿದೆ.

ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಆದರೆ ಅದಕ್ಕೀಗ ನಿತೀಶ್‌ ಅವರಿಗೆ ಮನಸ್ಸಿದ್ದಂತಿಲ್ಲ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT