ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಬದಲಾವಣೆ ಕಾಂಗ್ರೆಸ್ ಹರಡುತ್ತಿರುವ ಸುಳ್ಳು: ಅಮಿತ್ ಶಾ

Published 30 ಏಪ್ರಿಲ್ 2024, 6:22 IST
Last Updated 30 ಏಪ್ರಿಲ್ 2024, 6:22 IST
ಅಕ್ಷರ ಗಾತ್ರ

ಗುವಾಹಟಿ(ಅಸ್ಸಾಂ): ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಮತ್ತು ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂಬ ಸುಳ್ಳುಗಳನ್ನು ಕಾಂಗ್ರೆಸ್‌ ಹರಡುತ್ತಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದ ಮತ್ತು ಬೆಂಬಲದಿಂದ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಮ್ಮ ಪಕ್ಷ ವಿರೋಧಿಸುತ್ತದೆ. ಏಕರೂಪ ನಾಗರಿಕ ಸಂಹಿತೆ ಜಾರಿ ಪರ ಬಿಜೆಪಿ ನಿಂತಿದೆ ಎಂದು ಹೇಳಿದರು.

ದಕ್ಷಿಣದ ರಾಜ್ಯಗಳ ಮತದಾರರಿಂದಲೂ ಪಕ್ಷಕ್ಕೆ ಉತ್ತಮ ಬೆಂಬಲ ಸಿಗುತ್ತಿದೆ. ಅಸ್ಸಾಂನ 14 ಲೋಕಸಭಾ ಸ್ಥಾನಗಳ ಪೈಕಿ 12ರಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT