ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಬಿಜೆಪಿ ಸೇರಿದ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ 

Published 27 ಫೆಬ್ರುವರಿ 2024, 13:26 IST
Last Updated 27 ಫೆಬ್ರುವರಿ 2024, 13:26 IST
ಅಕ್ಷರ ಗಾತ್ರ

ಗಾಂಧಿನಗರ (ಪಿಟಿಐ): ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಗುಜರಾತ್‌ನಲ್ಲಿ ಹಿನ್ನಡೆ ಉಂಟಾಗಿದ್ದು, ಪಕ್ಷದ ರಾಜ್ಯಸಭಾ ಸದಸ್ಯ ನಾರಣ್‌ ರಾಠವಾ ಅವರು ತಮ್ಮ ಪುತ್ರ ಹಾಗೂ ಬೆಂಬಲಿಗರೊಂದಿಗೆ ಮಂಗಳವಾರ ಬಿಜೆಪಿ ಸೇರಿದರು.

ಈ ಹಿಂದೆ ಕೇಂದ್ರ ಸಚಿವರಾಗಿದ್ದ ರಾಠವಾ, ಗುಜರಾತ್‌ನ ಛೋಟಾ ಉದಯಪುರ ಭಾಗದ ಬುಡಕಟ್ಟು ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ. ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಇದೇ ವರ್ಷ ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ.  

ರಾಠವಾ, ಐದು ಸಲ (1989, 1991, 1996, 1998 ಮತ್ತು 2004ರಲ್ಲಿ) ಲೋಕಸಭೆಗೆ ಆಯ್ಕೆಯಾಗಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ 2004 ರಲ್ಲಿ ರೈಲ್ವೆಯ ರಾಜ್ಯ ಖಾತೆ ಸಚಿವರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ಎದುರು ಸೋತಿದ್ದರು. 

ಅವರ ಮಗ ಸಂಗ್ರಾಮ್‌ಸಿಂಹ 2022ರ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಛೋಟಾ ಉದಯಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಮಂಗಳವಾರ ಆಯೋಜಿಸಿದ್ದ ಸಮಾರಂಭದಲ್ಲಿ ಬಿಜೆಪಿ ಗುಜರಾತ್‌ ಘಟಕದ ಅಧ್ಯಕ್ಷ ಸಿ.ಆರ್‌.ಪಾಟೀಲ್‌ ಅವರು ತಂದೆ–ಮಗ ಹಾಗೂ ಅವರ ಅಪಾರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT