ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಭ್ರಷ್ಟಾಚಾರ, ಸ್ವಜನಪಕ್ಷಪಾತ, ತುಷ್ಟೀಕರಣದ ಸಂಕೇತ: ಪ್ರಧಾನಿ ಮೋದಿ

Published 21 ನವೆಂಬರ್ 2023, 9:39 IST
Last Updated 21 ನವೆಂಬರ್ 2023, 9:39 IST
ಅಕ್ಷರ ಗಾತ್ರ

ಜೈಪುರ: 'ಕಾಂಗ್ರೆಸ್ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದ ಪ್ರಬಲ ಸಂಕೇತ'ವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ನ.25ರಂದು ನಡೆಯಲಿರುವ ವಿಧಾನ ಸಭೆ ಚುನಾವಾಣೆ ಹಿನ್ನೆಲೆಯಲ್ಲಿ, ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, 'ಆಡಳಿತ ಪಕ್ಷದ ನಾಯಕರು ನಿಮ್ಮನ್ನು ದರೋಡೆಕೋರರು, ಗಲಭೆಕೋರರು ಮತ್ತು ಕ್ರಿಮಿನಲ್‌ಗಳಿಗೆ ಒಪ್ಪಿಸಿದ್ದಾರೆ. ಇದರಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ' ಎಂದು ದೂರಿದರು.

ನಮ್ಮ ನಡುವೆ ದೇಶದ ಮೂರು ಶತ್ರುಗಳಾದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣ ಇರುವವರೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪವನ್ನು ಈಡೇರಿಸುವುದು ಕಷ್ಟ. ಕಾಂಗ್ರೆಸ್‌ ಈ ಮೂರು ದುಷ್ಟರ ಚಿಹ್ನೆ ಎಂದು ಮೋದಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT