ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಪಕ್ಷ ನಾಯಕನ ಆಯ್ಕೆ ಕಾಂಗ್ರೆಸ್‌ ನಿರ್ಧರಿಸಲಿದೆ: ಶರದ್‌ ಪವಾರ್‌

Published 20 ಜೂನ್ 2024, 15:18 IST
Last Updated 20 ಜೂನ್ 2024, 15:18 IST
ಅಕ್ಷರ ಗಾತ್ರ

ಮುಂಬೈ: ವಿರೋಧ ಪಕ್ಷಗಳ ಗುಂಪಿನಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ಹೊಂದಿರುವುದರಿಂದ ಲೋಕಸಭೆಯಲ್ಲಿ ಹೊಸ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್‌ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಎನ್‌ಸಿಪಿ (ಎಸ್‌ಪಿ) ವರಿಷ್ಠ ಶರದ್‌ ಪವಾರ್‌ ಹೇಳಿದ್ದಾರೆ.

‘ಜೂನ್ 24ರಿಂದ ಪ್ರಾರಂಭವಾಗುವ ಲೋಕಸಭೆ ಅಧಿವೇಶನಕ್ಕೆ ಮೊದಲು, ಇಂಡಿಯಾ ಮೈತ್ರಿಕೂಟದ ಪಾಲುದಾರರು ಸಭೆ ನಡೆಸಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುತ್ತಾರೆ. ನಾವು ನಿರ್ಧಾರವನ್ನು ಅನುಮೋದಿಸುತ್ತೇವೆ’ ಎಂದು ಪವಾರ್ ಹೇಳಿದರು. 

ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಹುದ್ದೆಯು ವಿರೋಧ ಪಕ್ಷಗಳ ಪಾಲಾಗುವ ಸಾಧ್ಯತೆ ಕಡಿಮೆ ಇದೆ ಎಂದ ಅವರು, ‘ಕಳೆದ ಬಾರಿ, ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳಿಗೆ ಉಪಸಭಾಪತಿ ಸ್ಥಾನ ನೀಡುವ ಭರವಸೆಯನ್ನು ಈಡೇರಿಸಲಿಲ್ಲ. ಮೋದಿ ಅವರು ಈ ಬಾರಿಯೂ ಇದನ್ನು ಒಪ್ಪದ ಕಾರಣ ಅದು ಈಡೇರುವ ಬಗ್ಗೆ ನನಗೆ ಅನುಮಾನವಿದೆ. ಆದರೂ ನಾವು ಆ ಬಗ್ಗೆ ಚರ್ಚಿಸಲಿದ್ದೇವೆ’ ಎಂದು ಹೇಳಿದರು. 

‘288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಮುಂದೆ ನಡೆಯಲಿರುವ ಚುನಾವಣೆಯನ್ನು ಗೆಲ್ಲಲು ವಿಪಕ್ಷಗಳ ಮಹಾ ವಿಕಾಸ್ ಆಘಾಡಿ (ಎಂವಿಎ) ಸಜ್ಜಾಗಿದೆ. ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಿತ್ರಪಕ್ಷಗಳು ಒಟ್ಟು 48 ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಗೆದ್ದಿವೆ. ಈ ಫಲಿತಾಂಶವನ್ನು ಗಮನಿಸಿದರೆ ನಾವು 155ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದೇವೆ’ ಎಂದು ಅವರು ಪವಾರ್‌ ವಿಶ್ವಾಸ ವ್ಯಕ್ತಪಡಿಸಿದರು.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT