ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸ್‌ಗಢ: ಕಾಂಗ್ರೆಸ್‌ನಿಂದ ನಾಳೆ ‘ವಿಶ್ವಾಸ ಯಾತ್ರೆ’

Published 1 ಅಕ್ಟೋಬರ್ 2023, 13:55 IST
Last Updated 1 ಅಕ್ಟೋಬರ್ 2023, 13:55 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸ್‌ಗಢದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಕುರಿತು ಜನರಿಗೆ ತಿಳಿಸಲು ಅಕ್ಟೋಬರ್‌ 2ರಂದು ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶ್ವಾಸ ಯಾತ್ರೆ’ (ಭರೋಸಾ ಯಾತ್ರೆ) ಕೈಗೊಳ್ಳಲಿದೆ.

ರಾಜ್ಯ ಕಾಂಗ್ರೆಸ್‌ನ ಸಂವಹನ ಘಟಕದ ಮುಖ್ಯಸ್ಥ ಸುಶೀಲ್‌ ಆನಂದ್‌ ಶುಕ್ಲಾ ಅವರು, ‘ಮಹಾತ್ಮ ಗಾಂಧಿ ಅವರ ಜನ್ಮದಿನದಂದು ನಡೆಯುವ ಯಾತ್ರೆ ವೇಳೆ, 2003–2018ರವರೆಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯ ದುರಾಡಳಿತವನ್ನೂ ಜನರೆದುರು ಬಯಲು ಮಾಡುತ್ತೇವೆ’ ಎಂದು ಹೇಳಿದರು.

ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌, ಸಂಪುಟ ಸದಸ್ಯರು, ಕಾಂಗ್ರೆಸ್‌ ಶಾಸಕರು ಮತ್ತು ಸಂಸದರು ಅವರವರ ಕ್ಷೇತ್ರಗಳಲ್ಲಿ ನಡೆಯುವ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಯಾತ್ರೆಯು ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ 25–30 ಕಿ.ಮೀ. ಸಂಚರಿಸಲಿದೆ. ಈ ವೇಳೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT