ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಧಿಕಾರ: ‘ಇಂಡಿಯಾ ಟುಡೆ’ ಸಮೀಕ್ಷೆ

Published 1 ಡಿಸೆಂಬರ್ 2023, 16:44 IST
Last Updated 1 ಡಿಸೆಂಬರ್ 2023, 16:44 IST
ಅಕ್ಷರ ಗಾತ್ರ

ನವದೆಹಲಿ: ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಇಂಡಿಯಾ ಟುಡೆ– ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯ ಮತಗಟ್ಟೆ ಸಮೀಕ್ಷೆ ತಿಳಿಸಿದೆ.

119 ಸ್ಥಾನಗಳಲ್ಲಿ 63 ರಿಂದ 73 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ಶುಕ್ರವಾರ ಪ್ರಕಟಗೊಂಡ ಸಮೀಕ್ಷೆಯು ‘ಭವಿಷ್ಯ’ ನುಡಿದಿದೆ. ಮೂರನೇ ಬಾರಿಗೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿರುವ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) 34 ರಿಂದ 44 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯು 4 ರಿಂದ 8 ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ಹೇಳಿದೆ. 

ಇಂಡಿಯಾ ಟುಡೆ– ಆಕ್ಸಿಸ್‌ ಮೈ ಇಂಡಿಯಾ ಸಂಸ್ಥೆಯು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ ಮತ್ತು ಮಿಜೋರಾಂ ರಾಜ್ಯಗಳಲ್ಲಿ ನಡೆಸಿದ್ದ ಮತಗಟ್ಟೆ ಸಮೀಕ್ಷೆಯ ವರದಿ ಗುರುವಾರ ಸಂಜೆ ಪ್ರಕಟಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT