ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನ ಮಾಜಿ ರಾಜ್ಯಪಾಲೆ ಕಮಲ ಬೆನಿವಾಲ್ ನಿಧನ

Published 15 ಮೇ 2024, 15:32 IST
Last Updated 15 ಮೇ 2024, 15:32 IST
ಅಕ್ಷರ ಗಾತ್ರ

ಜೈಪುರ: ಕಾಂಗ್ರೆಸ್‌ನ ಹಿರಿಯ ನಾಯಕಿ ಮತ್ತು ಗುಜರಾತ್‌ನ ಮಾಜಿ ರಾಜ್ಯಪಾಲೆ ಕಮಲ ಬೆನಿವಾಲ್ ಅವರು ಬುಧವಾರ ನಿಧನರಾಗಿದ್ದಾರೆ.

‘ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬೆನಿವಾಲ್‌(97) ಕೊನೆ ಉಸಿರೆಳೆದಿದ್ದು, ಗುರುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕುಟುಂಬ ಸದಸ್ಯರೊಬ್ಬರು ತಿಳಿಸಿದ್ದಾರೆ.

ಬೆನಿವಾಲ್‌ ಅವರು ತ್ರಿಪುರಾ ಮತ್ತು ಮಿಜೋರಾಂನ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಏಳು ಬಾರಿ ಶಾಸಕರಾಗಿದ್ದ ಬೆನಿವಾಲ್, ರಾಜಸ್ಥಾನದ ಉಪಮುಖ್ಯಮಂತ್ರಿಯಾಗಿದ್ದರು.

ಬೆನಿವಾಲ್ ನಿಧನಕ್ಕೆ ರಾಜಸ್ಥಾನ ರಾಜ್ಯಪಾಲ ಕಾಲ್ರಾಜ್‌ ಮಿಶ್ರಾ, ಮುಖ್ಯಮಂತ್ರಿ ಭಜನ್‌ಲಾಲ್‌ ಶರ್ಮ, ಮಾಜಿ ಮುಖ್ಯಮಂತ್ರಿ ಅಶೋಕ್‌ ಲಾಲ್‌ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

ನವದೆಹಲಿ (ಪಿಟಿಐ): ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ ಅವರು ಬುಧವಾರ ನಿಧನರಾಗಿದ್ದರೆ.

ನ್ಯೂಮೋನಿಯದಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿನಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT