ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajasthan Election | ಕಾಂಗ್ರೆಸ್‌ಗೆ ಮತ್ತೊಂದು ಅವಕಾಶ ಸಿಗಲಿದೆ: ಸಚಿನ್ ಪೈಲಟ್

Published 25 ನವೆಂಬರ್ 2023, 4:27 IST
Last Updated 25 ನವೆಂಬರ್ 2023, 4:27 IST
ಅಕ್ಷರ ಗಾತ್ರ

ಜೈಪುರ (ರಾಜಸ್ಥಾನ): ರಾಜ್ಯದಲ್ಲಿ ನಮ್ಮ ಪಕ್ಷಕ್ಕೆ ಮತ್ತೊಂದು ಅವಕಾಶ ಸಿಗಲಿದೆ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಿಶ್ವಾಸ ವ್ಯಕ್ತಪಡಿಸಿದ್ದು, ಈ ಬಾರಿ ಪರ್ಯಾಯ ಸರ್ಕಾರಗಳ ಪ್ರವೃತ್ತಿಯನ್ನು ಬದಲಾಯಿಸುವತ್ತ ಜನರ ಚಿತ್ತವಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ. ಸರ್ಕಾರ ರಚಿಸಲು ಬೇಕಾದ ಸಂಖ್ಯಾಬಲವನ್ನು ನಾವು ಪಡೆಯುತ್ತೇವೆ. ರಾಜ್ಯದ ಜನ ಬದ್ಧತೆ ಉಳಿಸಿಕೊಳ್ಳುವವರಿಗೆ ಮತ ಹಾಕುತ್ತಾರೆ ಎಂಬ ನಂಬಿಕೆ ಇದೆ’ ಎಂದು ತಿಳಿಸಿದ್ದಾರೆ.

ನನ್ನ ಮತ್ತು ಅಶೋಕ್ ಗೆಹಲೋತ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಪಕ್ಷಕ್ಕಾಗಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಎರಡು –ಮೂರು ಜನರಿಂದ ಇದು ಸಾಧ್ಯ ಎಂದು ಹೇಳುತ್ತಿಲ್ಲ. ಬದಲಾಗಿ ಇಡೀ ರಾಜಸ್ಥಾನದ ಕಾಂಗ್ರೆಸ್ ಘಟಕವು ಒಗ್ಗೂಡಿ ಶ್ರಮಿಸಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಬಿರುಸಿನ ಪ್ರಚಾರದ ನಂತರ ಇಂದು ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಕರಣಾಪುರ ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 73 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಸರ್ಕಾರ ರಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT