ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನ ಚುನಾವಣೆ | ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ: ಸಿಎಂ ಅಶೋಕ್ ಗೆಹಲೋತ್

Published 27 ನವೆಂಬರ್ 2023, 12:50 IST
Last Updated 27 ನವೆಂಬರ್ 2023, 12:50 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಗೆಹಲೋತ್‌, ‘ಚುನಾವಣಾ ಪ್ರಚಾರ ವೇಳೆ ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದರು. ಧರ್ಮವನ್ನು ಎಳೆತಂದರು ಆದರೆ, ರಾಜ್ಯದ ಜನರು ಅವರನ್ನು ತಿರಸ್ಕರಿಸಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವನ್ನು ಪಡೆಯಲಿದೆ’ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ರಾಜಸ್ಥಾನದಲ್ಲಿ ಕಾಂಗ್ರೆಸ್‌ ವಿರುದ್ಧ ಜನರನ್ನು ಕೆರಳಿಸುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದರು. ಆದರೆ ರಾಜ್ಯದ ಜನರು ಅವುಗಳನ್ನು ತಳ್ಳಿ ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ವಿರೋಧಿಯಾದ ಯಾವ ಅಂಶಗಳೂ ಇಲ್ಲ ಎಂದು ಗೆಹಲೋತ್‌ ತಿಳಿಸಿದರು.

ರಾಜಸ್ಥಾನದ 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಶನಿವಾರ (ನವೆಂಬರ್‌ 25) ಮತದಾನ ನಡೆದಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT