ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಸಂಪತ್ತು ಹೆಚ್ಚು ಮಕ್ಕಳಿದ್ದವರ ಪಾಲಾಗುತ್ತದೆ: ನರೇಂದ್ರ ಮೋದಿ

Published 21 ಏಪ್ರಿಲ್ 2024, 15:53 IST
Last Updated 21 ಏಪ್ರಿಲ್ 2024, 15:53 IST
ಅಕ್ಷರ ಗಾತ್ರ

ಜೈಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ‘ದೇಶದ ಸಂಪನ್ಮೂಲಗಳಿಗೆ ಅಲ್ಪಸಂಖ್ಯಾತರು ಮೊದಲ ಹಕ್ಕುದಾರರು’ ಎಂಬ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಹೇಳಿಕೆ ಪ್ರಸ್ತಾಪಿಸಿ ಅವರು ಹೀಗೆ ಪ್ರತಿಕ್ರಿಯಿಸಿದರು.

ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ‘ನನ್ನ ತಾಯಂದಿರೇ, ಸಹೋದರಿಯರೇ... ನಗರ ನಕ್ಸಲರ ಮನಃಸ್ಥಿತಿಯ ಅವರು ನಿಮ್ಮ ಮಂಗಳಸೂತ್ರವನ್ನೂ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಲ್ಲರು’ ಎಂದು ಹೇಳಿದರು.

‘ತಾಯಂದಿರು, ಸಹೋದರಿಯರ ಬಂಗಾರವನ್ನು ಲೆಕ್ಕ ಹಾಕುವುದಾಗಿ, ಅದರ ಬಗ್ಗೆ ಮಾಹಿತಿ ಪಡೆಯುವುದಾಗಿ, ನಂತರ ಸಂಪತ್ತನ್ನು ಮರು ಹಂಚಿಕೆ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಹೇಳುತ್ತದೆ. ಅದನ್ನು ಯಾರಿಗೆ ಹಂಚುತ್ತಾರೆ? ಮುಸ್ಲಿಮರು ದೇಶದ ಸಂಪತ್ತಿನ ಮೊದಲ ಹಕ್ಕುದಾರರು ಎಂದು ಮನಮೋಹನ್ ಸಿಂಗ್ ಸರ್ಕಾರ ಹೇಳಿತ್ತು. ಅದರ ಅರ್ಥ, ಹೆಚ್ಚು ಮಕ್ಕಳು ಇರುವವರಿಗೆ ಹಂಚಿಕೆ ಆಗುತ್ತದೆ. ನುಸುಳುಕೋರರಿಗೆ ನಿಮ್ಮ ಸಂಪತ್ತು ಹಂಚಿಕೆಯಾಗುತ್ತದೆ. ನೀವು ಕಷ್ಟದಿಂದ ಸಂಪಾದಿಸಿದ ಹಣ ನುಸುಳುಕೋರರ ಪಾಲಾಗಲೇ? ಅದಕ್ಕೆ ನಿಮ್ಮ ಸಮ್ಮತಿ ಇದೆಯೇ’ ಎಂದು ಮೋದಿ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT