ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Madhya Pradesh Election | ಕಾಂಗ್ರೆಸ್ 135 ಸ್ಥಾನ ಗೆಲ್ಲಲಿದೆ: ಸುರ್ಜೇವಾಲಾ

Published 2 ಡಿಸೆಂಬರ್ 2023, 11:14 IST
Last Updated 2 ಡಿಸೆಂಬರ್ 2023, 11:14 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶದಲ್ಲಿ 230 ವಿಧಾನಸಭಾ ಸ್ಥಾನಗಳ ಪೈಕಿ 135ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಹುಮತ ಪಡೆಯಲಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಪ್ರಚಂಡ ಗೆಲುವು ಸಾಧಿಸುವ ಮುನ್ಸೂಚನೆ ನೀಡಿವೆ. ಡಿಸೆಂಬರ್‌ 3 ರಂದು 18 ವರ್ಷಗಳಿಂದ ನಡೆಯುತ್ತಿರುವ ಬಿಜೆಪಿಯ ದುರಾಡಳಿತ ಕೊನೆಗೊಳ್ಳಲಿದೆ. ರಾಜ್ಯದ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಲು 135ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಈ ವಿಧಾನಸಭಾ ಚುನಾವಣೆಯು ಜನರು ಮತ್ತು ಬಿಜೆಪಿಯ ಹಗರಣಗಳು ಹಾಗೂ ವೈಫಲ್ಯಗಳ ನಡುವಿನ ಚುನಾವಣೆಯಾಗಿದೆ. ಇದರಲ್ಲಿ ಜನರು ಗೆಲ್ಲುತ್ತಾರೆ ಎಂದು ನಾನು ಸಂಪೂರ್ಣ ವಿಶ್ವಾಸದಿಂದ ಹೇಳುತ್ತೇನೆ’ ಎಂದು ಸುರ್ಜೇವಾಲಾ ಹೇಳಿದರು.

ಡಿಸೆಂಬರ್‌ 3 ರಂದು ನಡೆಯುವ ಮತ ಎಣಿಕೆಗೂ ಮುಂಚೆಯೇ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದೆ. ಆದರೂ, ಕಾಂಗ್ರೆಸ್‌ ಕಾರ್ಯಕರ್ತರ ಧೈರ್ಯವನ್ನು ಕುಗ್ಗಿಸಲು ಮತ್ತು ಚುನಾವಣಾ ಫಲಿತಾಂಶ ಬರುವ ಮೊದಲೇ ಕೆಲಸಗಳನ್ನು ಮಾಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಉದ್ದೇಶಪೂರ್ವಕವಾಗಿ ಕೆಲವು ಸಮೀಕ್ಷೆಗಳನ್ನು ಬಿಜೆಪಿ ನಡೆಸಿದೆ ಎಂದು ಕಾಂಗ್ರೆಸ್‌ ನಾಯಕ ಕಮಲ್‌ ನಾಥ್‌ ಆರೋಪಿಸಿದ್ದಾರೆ.

ಜಿಲ್ಲಾ ಘಟಕದ ಅಧ್ಯಕ್ಷರು, ಮುಂಚೂಣಿ ಸಂಘಟನೆಗಳ ಮುಖಂಡರು ಸೇರಿದಂತೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು ತಮ್ಮ ಕಾರ್ಯಗಳತ್ತ ಗಮನ ಹರಿಸುವ ಮೂಲಕ ಮತ ಎಣಿಕೆ ಸಂಪೂರ್ಣ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಕಮಲ್‌ ನಾಥ್‌ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT