ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕ ಬಿಜೆಪಿಗೆ

Published 30 ಏಪ್ರಿಲ್ 2024, 15:23 IST
Last Updated 30 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಭೋಪಾಲ್‌: ಕಾಂಗ್ರೆಸ್‌ ಮುಖಂಡ ಹಾಗೂ ಮಧ್ಯಪ್ರದೇಶದ ಶಾಸಕ ರಾಮ್‌ನಿವಾಸ್‌ ರಾವತ್‌ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಗೊಂಡರು.

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ವಾಪಸ್‌ ತೆಗೆದುಕೊಂಡ ಮರುದಿನ ಈ ಬೆಳವಣಿಗೆ ನಡೆದಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರ ಸಮ್ಮುಖದಲ್ಲಿ ರಾಮ್‌ನಿವಾಸ್‌ ಅವರು ಪಕ್ಷಕ್ಕೆ ಸೇರಿದರು. ಮೊರೆನಾ ಮೇಯರ್‌ ಶಾರದಾ ಸೋಲಂಕಿ ಅವರೂ ಬಿಜೆಪಿಗೆ ಸೇರ್ಪಡೆಗೊಂಡರು. ರಾಮ್‌ನಿವಾಸ್‌ ಅವರು ವಿಜಯ್‌ಪುರ ಕ್ಷೇತ್ರದ ಶಾಸಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT