ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳುಗಳ ಮೂಲಕ ಕಾಂಗ್ರೆಸ್ ಜನರ ಬೆಂಬಲ ಪಡೆದಿದೆ: ನಯಾಬ್ ಸಿಂಗ್ ಸೈನಿ

Published 6 ಜೂನ್ 2024, 11:11 IST
Last Updated 6 ಜೂನ್ 2024, 11:11 IST
ಅಕ್ಷರ ಗಾತ್ರ

ಚಂಡೀಗಢ(ಹರಿಯಾಣ): ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸಿ, ಸಂವಿಧಾನವನ್ನು ಬದಲಾವಣೆ ಮಾಡುತ್ತದೆ ಎಂಬ ಸುಳ್ಳನ್ನು ಹರಡುವಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯದಲ್ಲಿ ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಮಂಕಾಗಲು ಕಾರಣಗಳೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೈನಿ, ‘ಈ ವಿಚಾರವಾಗಿ ನಾವು ನಿನ್ನೆ ಶಾಸಕರು ಮತ್ತು ಸಚಿವರ ಸಭೆ ನಡೆಸಿ ಚರ್ಚಿಸಿದ್ದೇವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸುಳ್ಳುಗಳ ಮೂಲಕ ಜನರ ಬೆಂಬಲ ಪಡೆದಿದೆ’ ಎಂದರು.

‘ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ ಸಂವಿಧಾನವನ್ನು ಬದಲಾಯಿಸಲಾಗುತ್ತದೆ ಮೀಸಲಾತಿಯನ್ನು ಕೊನೆಗೊಳಿಸಲಾಗುತ್ತದೆ ಎಂಬ ಸುಳ್ಳನ್ನು ಹರಡುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ’ ಎಂದು ಹೇಳಿದರು.

‘ಈ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಶೇಕಡಾವಾರು ಮತ ಪ್ರಮಾಣ ಕಾಂಗ್ರೆಸ್‌ಗಿಂತ ಬಿಜೆಪಿಗೆ ಹೆಚ್ಚಿದೆ. ಬಿಜೆಪಿ ಶೇ 46.11 ರಷ್ಟು ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಶೇ 43.67 ರಷ್ಟು ಮತಗಳನ್ನು ಗಳಿಸಿದೆ’ ಎಂದು ತಿಳಿಸಿದರು.

‘ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಮಾಡಿದಷ್ಟು ಕೆಲಸವನ್ನು ಕಾಂಗ್ರೆಸ್ ತನ್ನ ಅರವತ್ತು ವರ್ಷಗಳ ಆಡಳಿತಾವಧಿಯಲ್ಲಿ ಮಾಡಲಿಲ್ಲ. ನಮ್ಮ ಸರ್ಕಾರ 25 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ. ಕಾಂಗ್ರೆಸ್‌ನ ಸುಳ್ಳನ್ನು ಅರ್ಥಮಾಡಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಮನವಿ ಮಾಡುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT