ತಿರುವನಂತಪುರ: ಕಾಂಗ್ರೆಸ್ ಧುರೀಣ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಾಜಿ ಅಧ್ಯಕ್ಷ ತೆನ್ನಲ ಬಾಲಕೃಷ್ಣ ಪಿಳ್ಳೈ (95), ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.

ತೆನ್ನಲ ಬಾಲಕೃಷ್ಣ ಅವರು ಎರಡು ಬಾರಿ ಶಾಸಕರಾಗಿ, ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ವರ್ಷಗಳಿಂದ ರಾಜಕೀಯದಿಂದ ದೂರ ಉಳಿದಿದ್ದರು.

ಕೇರಳದ ಕೊಲ್ಲಂ ಜಿಲ್ಲೆಯ ಶೂರನಾಡ್ ಎಂಬಲ್ಲಿ 1930ರ ಮಾರ್ಚ್11ರಂದು ಜನಿಸಿದ್ದ ಬಾಲಕೃಷ್ಣ ಪಿಳ್ಳೈ, ಕಾಂಗ್ರೆಸ್ ವಾರ್ಡ್ ಸಮಿತಿಯ ಅಧ್ಯಕ್ಷರಾಗಿ ರಾಜಕೀಯ ಪ್ರವೇಶಿಸಿದ್ದರು. 1977 ಮತ್ತು 1982ರಲ್ಲಿ ಅಡೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.