ತಿರುವನಂತಪುರ:ಕಾಂಗ್ರೆಸ್ ಹಿರಿಯ ನಾಯಕಟಾಮ್ ವಡಕ್ಕನ್ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಗುರುವಾರ ಬಿಜೆಪಿ ಸೇರಿದರು.

ಬಾಲಾಕೋಟ್ನಲ್ಲಿ ಉಗ್ರರ ಶಿಬಿರದ ಮೇಲೆ ವಾಯುಪಡೆ ನಡೆಸಿದ ದಾಳಿಯ ಬಗ್ಗೆ ಮತ್ತು ದೇಶದ ಸಶಸ್ತ್ರ ಪಡೆಗಳ ಸಾಮರ್ಥ್ಯದ ಕುರಿತುಅನುಮಾನ ವ್ಯಕ್ತಪಡಿಸಿದ ಪಕ್ಷದ ನಡೆಯಿಂದ ಬೇಸರವಾಗಿದೆ. ಹೀಗಾಗಿ ಬಿಜೆಪಿ ಸೇರುವ ತೀರ್ಮಾನ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಕುಟುಂಬ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಕೈ ಪಕ್ಷದಲ್ಲಿ ನಾಯಕರನ್ನು ಬೇಕಿದ್ದಾಗ ಬಳಸಿಕೊಂಡು ಬೇಡವಾದಾಗ ತಿರಸ್ಕರಿಸಲಾಗುತ್ತಿದೆ ಎಂದು ದೂರಿದ್ದಾರೆ. ಸುಮಾರು 20 ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದ ವಡಕ್ಕನ್ ಅವರು ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿಕಟವರ್ತಿಯಾಗಿದ್ದರು. ಕಾಂಗ್ರೆಸ್ನ ವಕ್ತಾರರಾಗಿದ್ದರು.

‘ರಾಜಕೀಯ ಪಕ್ಷವೊಂದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಂಡಾಗ ಅಂತಹ ಪಕ್ಷ ತ್ಯಜಿಸುವುದು ಬಿಟ್ಟು ಬೇರೆ ಆಯ್ಕೆಗಳಿರಲಿಲ್ಲ’ ಎಂದು ವಡಕ್ಕನ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಅಜೆಂಡಾದ ಮೇಲೆ ನಂಬಿಕೆ ಇರುವುದಾಗಿಯೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.