2014–15 ಮತ್ತು 2016–17ರ ಸಾಲಿನ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಯನ್ನು ಐ.ಟಿ. ಆರಂಭಿಸಿದ್ದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಕಾಂಗ್ರೆಸ್ ಈ ಹಿಂದೆ ಅರ್ಜಿ ಸಲ್ಲಿಸಿತ್ತು. ವಾರದ ಹಿಂದೆಯಷ್ಟೆ ಈ ಅರ್ಜಿಯನ್ನು ತಿರಸ್ಕರಿಸಿದ್ದ ಕೋರ್ಟ್, ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ಈ ಪ್ರಕ್ರಿಯೆಯಲ್ಲಿ ಮೂಗುತೂರಿಸುವುದಿಲ್ಲ ಎಂದಿತ್ತು.