ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಪಕ್ಷಗಳ ನಾಶಕ್ಕೆ ಮಮತಾ ಸಂಚು: ಬಿಜೆಪಿ ನಾಯಕ ಕೈಲಾಸ್ ವಿಜಯವರ್ಗೀಯ ಆರೋಪ

Last Updated 6 ಜೂನ್ 2021, 9:40 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷವನ್ನು ನಾಶ ಮಾಡಲು ಬಯಸಿದ್ದಾರೆ ಎಂದು ಬಿಜೆಪಿ ನಾಯಕ ಕೈಲಾಸ್ ವಿಜಯವರ್ಗೀಯ ಆರೋಪಿಸಿದ್ದಾರೆ.

ಪರಿಹಾರ ಸಾಮಗ್ರಿಗಗಳನ್ನು ಕದ್ದ ಆರೋಪದಲ್ಲಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಬಗ್ಗೆ ಪ್ರತಿಕ್ರಿಯಿಸಿದ ವಿಜಯವರ್ಗೀಯ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದು ಬಿಜೆಪಿ ವಿರುದ್ಧದ ಸಂಚು. ಬಿಜೆಪಿ ಕಚೇರಿಯ ಹೊರಭಾಗದಲ್ಲಿ ನಿನ್ನೆ ಬಾಂಬ್‌ಗಳು ಪತ್ತೆಯಾಗಿದ್ದವು. ಮಮತಾ ಬ್ಯಾನರ್ಜಿ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಅವರು ಪ್ರತಿಪಕ್ಷವನ್ನು ನಾಶಗೊಳಿಸಲು ಬಯಸಿದ್ದಾರೆ ಎಂದು ಅವರು ದೂರಿರುವುದಾಗಿ ‘ಎಎನ್‌ಐ’ ಟ್ವೀಟ್ ಮಾಡಿದೆ.

ಪಶ್ಚಿಮ ಬಂಗಾಳದ ಕಾಂತಿ ಪುರಸಭೆ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಪರಿಹಾರ ಸಾಮಾಗ್ರಿಗಗಳನ್ನು ಕದ್ದ ಆರೋಪದ ಮೇಲೆ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT