ಪ್ರಯಾಗ್ರಾಜ್: ಸಂವಿಧಾನವು ಬಲವಂತದ ಮತಾಂತರವನ್ನು ಬೆಂಬಲಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.

ಉತ್ತರ ಪ್ರದೇಶದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ 2021ರ ಅಡಿಯಲ್ಲಿ ನಾಲ್ವರ ವಿರುದ್ಧ ದಾಖಲಿಸಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೋದ್ ದಿವಾಕರ್, ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಮುಕ್ತವಾಗಿ ಪಾಲಿಸುವ ಹಕ್ಕನ್ನು ನೀಡಿದ್ದು, ಬಲವಂತದ ಅಥವಾ ಮೋಸದ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಆರೋಪಿಗಳು ಹಣ ಮತ್ತು ಉಚಿತ ವೈದ್ಯಕೀಯ ಸೇವೆ ನೀಡುವ ಮೂಲಕ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಿದ್ದರು ಎಂದು ದೂರು ದಾಖಲಿಸಲಾಗಿತ್ತು.
.ಅಮೆರಿಕದ ಮಾಜಿ ಅಧ್ಯಕ್ಷ 82 ವರ್ಷದ ಜೋ ಬೈಡನ್ಗೆ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆ.ಪ್ರೊಫೆಸರ್ ಖಾನ್ ಬಂಧನ ಪ್ರಶ್ನಿಸಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ.
ಈ ಆರೋಪಿಗಳ ವಿರುದ್ಧ ಕೇಳಿಬಂದಿರುವ ಆರೋಪಗಳು ಗಂಭೀರ ಸ್ವರೂಪದಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ 2021ರ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯ, ಸಂವಿಧಾನದ 25 ನೇ ವಿಧಿಗೆ ಅನುಗುಣವಾಗಿ ಸಾರ್ವಜನಿಕ ಸುವ್ಯವಸ್ಥೆ, ನೈತಿಕ ಸಮಗ್ರತೆ ಮತ್ತು ಸಮಾಜದ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.
.1 ಲಕ್ಷ ಹಕ್ಕುಪತ್ರ ವಿತರಣೆ ಇದೇ ಮೊದಲು: ಕೆಪಿಸಿಸಿ ವಕ್ತಾರ ಕಶ್ಯಪ್ ನಂದನ್.ಪಾತ್ರದಲ್ಲಿ ಗಟ್ಟಿತನವಿರಬೇಕು.. ಪ್ರಜಾವಾಣಿಯೊಂದಿಗೆ ಮೇಘನಾ ಗಾಂವ್ಕರ್ ಮಾತುಗಳು.
'ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನು ತಡೆಯುವುದು ಈ ಕಾಯಿದೆಯ ಮುಖ್ಯ ಉದ್ದೇಶವಾಗಿದೆ. ಬಲವಂತ, ಅನಗತ್ಯ ಪ್ರಭಾವ, ಆಮಿಷ, ಮೋಸದ ವಿಧಾನಗಳ ,ಮೂಲಕ ಮತಾಂತರ ಮಾಡುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಸಾಮಾಜಿಕ ಸಾಮರಸ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ' ಎಂದು ನ್ಯಾಯಾಲಯ ತಿಳಿಸಿದೆ.
.ಉತ್ತರ ಪ್ರದೇಶದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನ.IPL 2025 | ‘ಚಿನ್ನಸ್ವಾಮಿ ಫಾಲ್ಸ್..ಎಂಥ ಮಳೆ..’.ಬಂಡವಾಳ ಮಾರುಕಟ್ಟೆ | ಪಿಪಿಎಫ್- ಎಫ್ಡಿ: ಯಾವುದು ಸೂಕ್ತ?.ಪ್ಯಾನ್ ಇಲ್ಲದೆ ಆಸ್ತಿ ನೋಂದಣಿ ಇಲ್ಲ; ₹30 ಲಕ್ಷ ಮೇಲ್ಪಟ್ಟ ಖರೀದಿಗೆ ಅನ್ವಯ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.