ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂಎವೈಯು: 3.6 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ

Last Updated 24 ನವೆಂಬರ್ 2021, 7:35 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆ–ನಗರ (ಪಿಎಂಎವೈಯು) ಅಡಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಇದರೊಂದಿಗೆ ಅನುಮೋದನೆ ನೀಡಲಾದ ಮನೆಗಳ ಒಟ್ಟು ಸಂಖ್ಯೆ 1.14 ಕೋಟಿ ಆಗಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

‘ಸಚಿವಾಲಯದ ಕಾರ್ಯದರ್ಶಿ ದುರ್ಗಾಶಂಕರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರೀಯ ಮಂಜೂರಾತಿ ಮತ್ತು ಮೇಲ್ವಿಚಾರಣಾ ಸಮಿತಿ (ಸಿಎಸ್‌ಎಂಸಿ) ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು’ ಎಂದು ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

‘ಅನುಮೋದಿತ ಮನೆಗಳ ಪೈಕಿ 89 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, 52.5 ಲಕ್ಷ ಮನೆಗಳು ಪೂರ್ಣಗೊಂಡಿದ್ದು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

‘₹ 7.52 ಲಕ್ಷ ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಪಾಲು ₹ 1.85 ಲಕ್ಷ ಕೋಟಿ. ಈ ವರೆಗೆ ಕೇಂದ್ರ ಸರ್ಕಾರ ₹ 1.13 ಲಕ್ಷ ಕೋಟಿ ಬಿಡುಗಡೆ ಮಾಡಿದೆ’ ಎಂದೂ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT