ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಾವತಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ

Last Updated 23 ಆಗಸ್ಟ್ 2018, 18:50 IST
ಅಕ್ಷರ ಗಾತ್ರ

ಹೈದರಾಬಾದ್‌: ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನವು (ಟಿಟಿಡಿ) ವೆಂಕಟೇಶ್ವರ ದೇವಸ್ಥಾನ ನಿರ್ಮಿಸಲು ಉದ್ದೇಶಿಸಿದೆ.

ಟಿಟಿಡಿಗೆ ಹಂಚಿಕೆ ಮಾಡಿರುವ 25 ಎಕರೆ ಪ್ರದೇಶದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ದೇವಸ್ಥಾನ ಕುರಿತ ಯೋಜನೆಯ ವಿವರಗಳನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಪಿ.ಭಾಸ್ಕರ್‌ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಗುರುವಾರ ವಿವರಿಸಿದರು.

’ದೇವಸ್ಥಾನದ ಹೊರಗೂ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಬೇಕು. ಇದಕ್ಕಾಗಿ ಪ್ರತ್ಯೇಕ ನಿಧಿ ಬಳಸಬೇಕು’ ಎಂದು ಚಂದ್ರಬಾಬು ನಾಯ್ಡು ಅಧಿಕಾರಿಗಳಿಗೆ ಸೂಚಿಸಿದರು.

’ವಾಸ್ತುಶಾಸ್ತ್ರ ಪ್ರಕಾರವೇ ಯೋಜನೆಯನ್ನು ರೂಪಿಸಲಾಗಿದೆ. ದೇವಾಲಯದ ವಿನ್ಯಾಸವು ಪಲ್ಲವ, ಚೋಳ, ಚಾಲುಕ್ಯ ಮತ್ತು ವಿಜಯನಗರ ಕಾಲದ ವಾಸ್ತುಶಿಲ್ಪವನ್ನು ಒಳಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT