ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಮುಂದುವರಿದ ಬಿಸಿಗಾಳಿ ಸ್ಥಿತಿ: 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

Published 8 ಮೇ 2024, 9:55 IST
Last Updated 8 ಮೇ 2024, 9:55 IST
ಅಕ್ಷರ ಗಾತ್ರ

ತಿರುವನಂತಪುರ: ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದ್ದು ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಿದೆ.

ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್‌ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇರುವ ಕಾರಣ ನಾಳೆಯವರೆಗೆ (ಮೇ.9) ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಉಳಿದಂತೆ, ಎರ್ನಾಕುಲಂ, ತ್ರಿಶೂರ್, ಕಣ್ಣೂರು, ಕಾಸರಗೋಡಿನಲ್ಲಿ ಮೇ 10ರವರೆಗೂ ತಾಪಮಾನ ಏರಿಕೆಯಾಗುವ ಸಂಭವವಿದೆ. ಗುಡ್ಡಗಾಡು ಪ್ರದೇಶ ಹೊರತುಪಡಿಸಿ ಉಳಿದೆಡೆ ರಾತ್ರಿಯೂ ಬಿಸಿ ಮತ್ತು ಆರ್ದೃ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT