ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಾಕ್‌ ಜತೆಗಿನ ನಿರಂತರ ಮಾತುಕತೆ ಮುಗಿದ ಅಧ್ಯಾಯ: ಸಚಿವ ಎಸ್‌.ಜೈಶಂಕರ್‌

Published : 30 ಆಗಸ್ಟ್ 2024, 22:30 IST
Last Updated : 30 ಆಗಸ್ಟ್ 2024, 22:30 IST
ಫಾಲೋ ಮಾಡಿ
Comments

ನವದೆಹಲಿ: ಪಾಕಿಸ್ತಾನದ ಜತೆಗಿನ ನಿರಂತರ ಮಾತುಕತೆ ಮುಗಿದ ಅಧ್ಯಾಯ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಶುಕ್ರವಾರ ಹೇಳಿದರು.

‘ಪಾಕಿಸ್ತಾನವು ಗಡಿಯುದ್ದಕ್ಕೂ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ. ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ’ ಎಂದು ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಅವರು ಭಾರತದ ನಿಲುವನ್ನು ಸ್ಪಷ್ಟಪಡಿಸಿದರು.

‘ನಾವು ನಿಷ್ಕ್ರಿಯರಾಗಿ ಉಳಿದುಕೊಂಡಿಲ್ಲ. ಗಡಿಯಾಚೆಯಿಂದ ಬರುವ ಸಕಾರಾತ್ಮಕ ಮತ್ತು ನಕಾರಾತ್ಮಕ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಲು ಸಜ್ಜಾಗಿದ್ದೇವೆ’ ಎಂದರು. 

‘ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ, 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ನಾವು ತೆಗೆದು ಹಾಕಿದ್ದೇವೆ. ಆದರೆ ಭಯೋತ್ಪಾದನೆ ಚಟುವಟಿಕೆ ಮುಂದುವರಿದಿದೆ. ಹೀಗಿರುವಾಗ, ಪಾಕಿಸ್ತಾನದ ಜತೆ ಯಾವ ರೀತಿಯ ಸಂಬಂಧ ಹೊಂದಿರಬೇಕು ಎಂಬ ಬಗ್ಗೆ ಆಲೋಚಿಸಬೇಕಾಗಿದೆ’ ಎಂದು ಹೇಳಿದರು.

ಅಫ್ಗಾನಿಸ್ತಾನಕ್ಕೆ ಸಂಬಂಧಿಸಿದಂತೆ, ಅಲ್ಲಿನ ಜನರೊಂದಿಗೆ ನಾವು ಬಲವಾದ ಸಂಬಂಧವನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT