ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಹಾಸ್ಯ ಕಲಾವಿದ ಕುನಾಲ್ ಕಾಮ್ರಾಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಮುಂಬೈನ ಖಾರ್ ಪ್ರದೇಶದ ಪೊಲೀಸರು ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಮ್ರಾ ವಿರುದ್ಧ ಕ್ರಮ ಜರುಗಿಸುವಂತೆ ದೂರು ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕಾಮ್ರಾಗೆ ನೋಟಿಸ್ ನೀಡಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಾಮ್ರಾ, ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೋರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

36 ವರ್ಷದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು ‘ವಂಚಕ’ ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.

ಕಾಮ್ರಾ ಅವರ ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ದಾಂದಲೆ ನಡೆಸಿದ ಆರೋಪದ ಅಡಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಮತ್ತು 11 ಮಂದಿ ಇತರರನ್ನು ಬಂಧಿಸಿದ್ದಾರೆ. ದಾಂದಲೆ ನಡೆಸಿದವರ ಪೈಕಿ 15–20 ಮಂದಿಯನ್ನು ಗುರುತಿಸುವ ಕೆಲಸ ಇನ್ನೂ ಆಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.Kunal Kamra Controversy | ಕುನಾಲ್ ಹಾಸ್ಯ: ‘ಮಹಾ’ದಲ್ಲಿ ಗದ್ದಲ.ಶಿಂದೆ ‘ದೇಶದ್ರೋಹಿ’ ಎಂದ ಸ್ಟ್ಯಾಂಡ್ಅಪ್ ಕಾಮಿಡಿಯನ್ ಕುನಾಲ್: ಹೋಟೆಲ್ಗೆ ಹಾನಿ.ಕುನಾಲ್ ಕಾಮ್ರಾ ಯಾರು? ಶಿಂದೆಯನ್ನು ಟೀಕಿಸುವ ಅರ್ಹತೆಗಳಿವೆಯೇ?: ನಟಿ ಕಂಗನಾ ರನೌತ್.ಕಾಮ್ರಾ ಹೇಳಿಕೆ; ಮಾತನಾಡಲು 'ಸುಪಾರಿ' ತೆಗೆದುಕೊಂಡಂತಿದೆ: ಏಕನಾಥ ಶಿಂದೆ.ಶಿಂದೆ ಕ್ಷಮೆಯಾಚಿಸುವುದಿಲ್ಲ, ವಿಧ್ವಂಸಕ ಕೃತ್ಯ ಖಂಡಿಸುವೆ: ಕಾಮ್ರಾ.ಶಿಂದೆ ವಿರುದ್ಧ ಕಾಮ್ರಾ ಆಕ್ಷೇಪಾರ್ಹ ಹೇಳಿಕೆ:ಹೋಟೆಲ್ ಧ್ವಂಸಗೊಳಿಸಿದವರ ಮೇಲೆ ಕೇಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.