ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೋಯ್ಡಾ: ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ 8 ಶಂಕಿತ ಆರೋಪಿಗಳ ಬಂಧನ

Published 15 ಜೂನ್ 2024, 2:58 IST
Last Updated 15 ಜೂನ್ 2024, 2:58 IST
ಅಕ್ಷರ ಗಾತ್ರ

ನೋಯ್ಡಾ: 48 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಅಪರಾಧ ಹಿನ್ನೆಲೆಯಿರುವ 8 ಆರೋಪಿಗಳನ್ನು ನೋಯ್ಡಾ ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧನಕ್ಕೊಳಗಾದವರಲ್ಲಿ ದೆಹಲಿ ಮೂಲದ ದರೋಡೆಕೋರನೊಬ್ಬನಿದ್ದು, ಆತನ ವಿರುದ್ಧ ದೆಹಲಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 24 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅಲ್ಲದೇ 'ಥಕ್-ಥಕ್' ಗ್ಯಾಂಗ್‌ನ ಇಬ್ಬರು ಸದಸ್ಯರೂ ಇದ್ದಾರೆ ಎಂದು ಅವರು ತಿಳಿಸಿದರು.

ಆರೋಪಿಗಳಿಂದ ₹1 ಲಕ್ಷ ನಗದು, ನಂಬರ್ ಪ್ಲೇಟ್ ಇಲ್ಲದ ಬೈಕ್‌, ಎರಡು ಅಕ್ರಮ ಬಂದೂಕುಗಳು ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಎಲ್ಲಾ ಆರೋಪಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT