ನವದೆಹಲಿ: ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 93,337 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 1,247 ಮಂದಿ ಮೃತಪಟ್ಟಿದ್ದಾರೆ.

ಶನಿವಾರ ಸಂಜೆ ವೇಳೆಗೆ ವಿವಿಧ ರಾಜ್ಯಗಳ ಆರೋಗ್ಯ ಸಚಿವಾಲಯಗಳು ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಪ್ರಮಾಣವೂ ಹೆಚ್ಚಾಗಿದೆ.

ಪಶ್ಚಿಮ ಬಂಗಾಳದಲ್ಲಿ ಶನಿವಾರ 3,188 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಡಪಟ್ಟಿದ್ದು, 56 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ 2,21,960 ಮಂದಿಗೆ ಸೋಂಕು ತಗುಲಿದ್ದು, 1,93,014 ಜನ ಗುಣಮುಖರಾಗಿದ್ದಾರೆ. 4,298 ಸಾವು ಸಂಭವಿಸಿದೆ. ಸದ್ಯ 24,648 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ:ಕೋವಿಡ್–19: ಚೇತರಿಕೆ ಸಂಖ್ಯೆಯಲ್ಲಿ ಅಮೆರಿಕಕ್ಕಿಂತ ಮುಂದಿದೆ ಭಾರತ

ರಾಜಸ್ಥಾನದಲ್ಲಿ 1,834 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 14 ಸಾವು ಸಂಭವಿಸಿದೆ. ಈವರೆಗೆ 1,13,124 ಜನರು ಸೋಂಕಿತರಾಗಿದ್ದು, ಈ ಪೈಕಿ 1,322 ಮಂದಿ ಮೃತಪಟ್ಟಿದ್ದಾರೆ. 93,805 ಸೋಂಕಿತರು ಚೇತರಿಸಿಕೊಂಡಿದ್ದಾರೆ. 17,997 ಸಕ್ರಿಯ ಪ್ರಕರಣಗಳಿವೆ.

ಉತ್ತರಾಖಂಡದಲ್ಲಿ 2,078, ಮಣಿಪುರದಲ್ಲಿ 117, ಮಧ್ಯಪ್ರದೇಶದಲ್ಲಿ 2,607, ಆಂಧ್ರಪ್ರದೇಶದಲ್ಲಿ 8,218, ಜಮ್ಮು–ಕಾಶ್ಮೀರದಲ್ಲಿ 1,492 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ:Covid Karnataka Update: ಒಂದೇ ದಿನ ಹತ್ತು ಸಾವಿರಕ್ಕೂ ಹೆಚ್ಚು ಜನ ಚೇತರಿಕೆ

ಕರ್ನಾಟಕದಲ್ಲಿ8,364 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 114 ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ10,815 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 6.24 ಕೋಟಿ ಕೋವಿಡ್ ಟೆಸ್ಟ್: ದೇಶದಲ್ಲಿ ಸೋಂಕು ಮೊದಲು ಕಾಣಿಸಿಕೊಂಡಾಗಿನಿಂದ ಈದುವರೆಗೆ ಒಟ್ಟು 6,24,54,254 ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಶುಕ್ರವಾರ ಒಂದೇ ದಿನ ಒಟ್ಟು 8,81,911 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋದನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.