ನವದೆಹಲಿ: ದೇಶದಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕುಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಆ ಮೂಲಕ ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗಗಳ ಕುರಿತು ಪ್ರಧಾನಿ ಮೋದಿ ಚರ್ಚೆ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸಭೆಯಲ್ಲಿ ಹಾಜರಿದ್ದರು.

ಈಗಾಗಲೇ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದ ಸಾವಿನ ಸಂಖ್ಯೆ 50ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 12 ಮಂದಿ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.

ಇಲ್ಲಿಯವರೆಗೆ ದೇಶದಲ್ಲಿ ಕೊರೊನಾ ಸೋಂಕು ಇರುವುದು ದೃಢವಾದವರ ಸಂಖ್ಯೆ 1965ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ದೇಶದಾದ್ಯಂತ ಉಲ್ಬಣಗೊಳ್ಳುತ್ತಿರುವ ಕೊರೊನಾ ಸೋಂಕು ಹರಡುವಿಕೆಯಆತಂಕಕಾರಿ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅವಲೋಕನ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.