ನವದೆಹಲಿ: ತಮಿಳುನಾಡಿನಲ್ಲಿ ಇಂದು (ಸೋಮವಾರ) ಒಂದೇ ದಿನ 3949 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 62 ಸಾವು ಸಂಭವಿಸಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ತಮಿಳುನಾಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 86224ಕ್ಕೆ ಏರಿಕೆಯಾಗಿದೆ. 47749 ಮಂದಿ ಗುಣಮುಖರಾಗಿದ್ದರೆ 1141 ಸಾವು ಸಂಭವಿಸಿದೆ. 37331 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ 5257 ಪ್ರಕರಣಗಳು ಇಂದು ದೃಢಪಟ್ಟಿದ್ದು, 181 ಸಾವು ಸಂಭವಿಸಿದೆ. ಹಿಮಾಚಲ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 919 ತಲುಪಿದೆ. 363 ಸಕ್ರಿಯ ಪ್ರಕರಣಗಳಿದ್ದು, 536 ಮಂದಿ ಚೇತರಿಸಿಕೊಂಡಿದ್ದಾರೆ. 7 ಮಂದಿ ಈವರೆಗೆ ಮೃತಪಟ್ಟಿದ್ದಾರೆ.

ಕೇರಳದಲ್ಲಿ 121 ಪ್ರಕರಣಗಳು ಇಂದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4311ಕ್ಕೆ ಏರಿಕೆಯಾಗಿದೆ. ಸದ್ಯ 2057 ಸಕ್ರಿಯ ಪ್ರಕರಣಗಳಿವೆ ಎಂದು ಮುಖ್ಯಮತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಬಿಹಾರದಲ್ಲಿ 282 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 9506ಕ್ಕೆ ಏರಿಕೆಯಾಗಿದೆ.

ಪಂಜಾಬ್‌ನಲ್ಲಿ 202 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5418 ತಲುಪಿದೆ. ಸಾವಿನ ಸಂಖ್ಯೆ 138ಕ್ಕೆ ಏರಿಕೆಯಾಗಿದೆ.

ಉತ್ತಾರಖಂಡದಲ್ಲಿ 8 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2831ಕ್ಕೆ ಏರಿಕೆಯಾಗಿದೆ.

ಐಟಿಬಿಪಿಯಲ್ಲಿ ನಾಲ್ಕು ಪ್ರಕರಣ ದೃಢ: ಇಂಡೊ–ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ನಾಲ್ವರು ಸಿಬ್ಬಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ಈ ಪಡೆಯಲ್ಲಿ ಸದ್ಯ 81 ಸಕ್ರಿಯ ಪ್ರಕರಣಗಳಿವೆ. ಈವರೆಗೆ 236 ಸಿಬ್ಬಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.