ನವದೆಹಲಿ: ವಿಶ್ವದಾದ್ಯಂತ ಕೋವಿಡ್-19 ಸೋಂಕು ವ್ಯಾಪಿಸುತ್ತಲೇ ಇದ್ದು, 3 ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿಪಡೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು, ಜನರು ಒಂದೆಡೆ ಒಟ್ಟಾಗಿ ಸೇರುವುದನ್ನು ತಪ್ಪಿಸಿ ಎಂದು ಶುಕ್ರವಾರ ಸೂಚಿಸಿದೆ.

ಈ ಕುರಿತು ಟ್ವೀಟ್ ಮಾಡಿದ್ದು, ಕೋವಿಡ್-19 ಸೋಂಕು ಹರಡುವಿಕೆಯು ನಿಯಂತ್ರಣಕ್ಕೆ ಬರುವವರೆಗೂ ಸಾಮೂಹಿಕ ಕೂಟಗಳನ್ನು ತಪ್ಪಿಸಬಹುದು ಅಥವಾ ಮುಂದೂಡಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.

ಒಂದು ವೇಳೆ ಜನರು ಸಾಮೂಹಿಕವಾಗಿ ಒಂದೆಡೆ ಸೇರುವಂತ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇ ಆದರೆ ರಾಜ್ಯ ಸರ್ಕಾರಗಳು ಆಯೋಜಕರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಮತ್ತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲೇಬೇಕು ಎಂದು ತಿಳಿಸಿದೆ.

ಕೋವಿಡ್-19 ಸೋಂಕು ಹರಡುವಿಕೆಯು ಅಂತರರಾಷ್ಟ್ರೀಯ ಡ್ರಿಲ್ ಅಲ್ಲ ಮತ್ತು ಏಕಾ ಏಕಿ ಹರಡುತ್ತಿರುವ ಸೋಂಕನ್ನು ತಡೆಯಬೇಕಾದರೆ ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕರು ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ವಿಶ್ವದಾದ್ಯಂತ ಕೋವಿಡ್-19 ಸೋಂಕಿಗೆ ಒಳಗಾಗಿರುವವರ ಸಂಖ್ಯೆಯು ಸುಮಾರು 10 ಸಾವಿರದ ಗಡಿ ತಲುಪಿದೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.