ಕೋಲ್ಕತ್ತ: ಕೊರೊನಾ ಸೋಂಕು ಇರುವುದು ದೃಢಪಟ್ಟ ನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮ ಬಂಗಾಳದ ಸಂಶೇರ್‌ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಗುರುವಾರ ಮುಂಜಾನೆ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೆಜೌಲ್ ಹಕ್ ಕಣಕ್ಕಿಳಿದಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು.

ಬುಧವಾರ ಅವರು ಜಂಗಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ರೆಜೌಲ್ ಅವರನ್ನು ಕೋಲ್ಕತ್ತದ ಆಸ್ಪತ್ರೆಗೆ ದಾಖಲಿಸಲಾಯಿತು.

ಕೋವಿಡ್–19: ಕೇರಳ ಸಿಎಂ ಪಿಣರಾಯಿ ವಿಜಯನ್ ಗುಣಮುಖ

ಚಿಕಿತ್ಸೆಗೆ ಸ್ಪಂದಿಸದೇ, ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ನಿಧನರಾದರು ಎಂದು ಮೂಲಗಳು ತಿಳಿಸಿವೆ. ಸಂಶೇರ್‌ಗಂಜ್‌ನಲ್ಲಿ ಏಪ್ರಿಲ್ 26ಕ್ಕೆ ಚುನಾವಣೆ ನಿಗದಿಯಾಗಿತ್ತು.

Covid-19 India Update: 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.