ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಅವಧಿಯಲ್ಲಿ ಶೇ 40 ಕಮಿಷನ್: ದಿಗ್ವಿಜಯ್ ಸಿಂಗ್ ಆರೋಪ

Published 19 ಮೇ 2024, 16:28 IST
Last Updated 19 ಮೇ 2024, 16:28 IST
ಅಕ್ಷರ ಗಾತ್ರ

ಮಹಾರಾಜ್‌ಗಂಜ್: ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರವು ಗರಿಷ್ಠ ಮಟ್ಟದಲ್ಲಿದ್ದು, ಸರ್ಕಾರಿ ಕೆಲಸಗಳಿಗೆ ಶೇ 28ರಿಂದ ಶೇ 40ರವರೆಗೆ ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಭಾನುವಾರ ಆರೋಪಿಸಿದ್ದಾರೆ. 

ನೌತಾನ್ವದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ‘ಮೋದಿ ಸರ್ಕಾರವು 9 ವರ್ಷಗಳಲ್ಲಿ ₹150 ಲಕ್ಷ ಕೋಟಿ ಸಾಲ ಪಡೆದಿದೆ. ಅದು 1947–2014ರ ನಡುವೆ ಮಾಡಿದ ಸಾಲಕ್ಕಿಂತ ಮೂರು ಪಟ್ಟು ಹೆಚ್ಚು’ ಎಂದು ತಿಳಿಸಿದರು.

‘ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸಲಿದ್ದು, ಅದಕ್ಕಾಗಿಯೇ ಅವರು 400 ಸ್ಥಾನ ಬಯಸುತ್ತಿದ್ದಾರೆ’ ಎಂದು ಅಭಿಪ್ರಾಯಪಟ್ಟರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT