ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ ಹಗರಣ | ಇ.ಡಿ ದಾಳಿ; ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೊ ಬಂಧನ

Published 27 ಅಕ್ಟೋಬರ್ 2023, 2:02 IST
Last Updated 27 ಅಕ್ಟೋಬರ್ 2023, 2:02 IST
ಅಕ್ಷರ ಗಾತ್ರ

ಕೋಲ್ಕತ್ತ: ಬಹುಕೋಟಿ ಮೊತ್ತದ ಪಡಿತರ ವಿತರಣೆ ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಅರಣ್ಯ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಜ್ಯೋತಿಪ್ರಿಯೊ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿದೆ.

ಸುಮಾರು 18 ತಾಸುಗಳ ಕಾಲ ಸುದೀರ್ಘ ವಿಚಾರಣೆಯ ಬಳಿಕ ಶುಕ್ರವಾರ ನಸುಕಿನ ವೇಳೆಯಲ್ಲಿ ಜ್ಯೋತಿಪ್ರಿಯೊ ಮಲ್ಲಿಕ್ ಅವರನ್ನು ಬಂಧಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಜ್ಯೋತಿಪ್ರಿಯೊ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಬಿಟ್ಟುಕೊಡುವಂತೆ ಮನವಿ ಮಾಡಲಾಗುವುದು ಎಂದು ಇ.ಡಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜ್ಯೋತಿಪ್ರಿಯೊ, ನನ್ನ ವಿರುದ್ಧ ಪಿತೂರಿ ನಡೆದಿದ್ದು, ಬಿಜೆಪಿಯ ಸುವೇಂದು ಅಧಿಕಾರಿ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಕೋಲ್ಕತ್ತದ ಸಾಲ್ಟ್‌ ಲೇಕ್‌ನಲ್ಲಿರುವ ಅರಣ್ಯ ಸಚಿವ ಮಲ್ಲಿಕ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದರು.

ಮಲ್ಲಿಕ್‌ ಅವರು ಆಹಾರ ಸಚಿವರಾಗಿದ್ದಾಗ ಅವರ ಮಾಜಿ ಆಪ್ತ ಸಹಾಯಕನ ನಿವಾಸ ಸೇರಿದಂತೆ ಇತರ 8 ಫ್ಲ್ಯಾಟ್‌ಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ಹಿಂದೆ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಇ.ಡಿ ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT