ನವದೆಹಲಿ: ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ನಡೆದ ಉಪರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಸಂಸತ್ ಭವನದಲ್ಲಿ ಆರಂಭವಾಗಿದೆ.
ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್(71) ಮತ್ತು ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ(80) ಕಣದಲ್ಲಿದ್ದಾರೆ.
ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ಶೇ 93ರಷ್ಟು ಮತದಾನ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಶೇಕಡ 93ರಷ್ಟು ಮತದಾನವಾಗಿದ್ದು, 50ಕ್ಕೂ ಅಧಿಕ ಸಂಸದರು ಮತದಾನದಿಂದ ದೂರ ಉಳಿದಿದ್ದರು.
ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 780 ಸಂಸದರಿದ್ದು, ಸಂಜೆ 5 ಗಂಟೆ ವೇಳೆಗೆ 725 ಮಂದಿ ಮತದಾನ ಮಾಡಿದ್ದರು ಎಂದು ವರದಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬೆಳಿಗ್ಗೆಯೇ ಮತದಾನ ಮಾಡಿದರು.
23 ಲೋಕಸಭಾ ಸದಸ್ಯರು ಸೇರಿ ಟಿಎಂಸಿಯ 39 ಸಂಸದರು ಮತದಾನ ಮಾಡಲಿಲ್ಲ.
ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್ ಗೆಲ್ಲುವ ಸಾಧ್ಯತೆಗಳು ನಿಚ್ಚಳವಾಗಿವೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.