ಮುಜಾಫರ್‌ನಗರ(ಉತ್ತರ ಪ್ರದೇಶ): ಮದುವೆಗೆ ಕುಟುಂಬಸ್ಥರು ಒಪ್ಪಿಗೆ ಸಿಗದೇ ಮನನೊಂದ ಯುವ ಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರನಗರದಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಪಂಕಜ್ (23) ಮತ್ತು ಶಿವಾನಿ (20) ಎಂದು ಗುರುತಿಸಲಾಗಿದೆ.

ಹುಡುಗಿಯ ಮನೆಯವರು ಮದುವೆ ಕುರಿತು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಪಂಕಜ್ ಮತ್ತು ಶಿವಾನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

‘ಮೃತರಿಬ್ಬರು ದೂರದ ಸಂಬಂಧಿಗಳಾಗಿದ್ದರು. ವಿಷಕಾರಿ ಪದಾರ್ಥಗಳನ್ನು ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿ ವಿನಯ್ ಕುಮಾರ್ ಗೌತಮ್ ತಿಳಿಸಿದ್ದಾರೆ.

ಇವನ್ನೂ ಓದಿ: ಗುಡಿಸಲಿನಲ್ಲಿ ಬೆಂಕಿ: 2 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ: ಆರೋಪಿ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.