ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಅಧಿವೇಶನ: ಸೊರೇನ್‌ಗೆ ಅನುಮತಿ ನಿರಾಕರಣೆ

Published 22 ಫೆಬ್ರುವರಿ 2024, 13:17 IST
Last Updated 22 ಫೆಬ್ರುವರಿ 2024, 13:17 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್‌ನಲ್ಲಿ ಶುಕ್ರವಾರದಿಂದ ಆರಂಭವಾಗುವ ರಾಜ್ಯ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿದ್ದ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜನವರಿ 31ರಂದು ಬಂಧಿಸಿತ್ತು. ಇ.ಡಿ ಕಸ್ಟಡಿ ಅವಧಿ ಮುಗಿದ ಬಳಿಕ ಫೆಬ್ರುವರಿ 15ರಂದು ಸೊರೇನ್‌ ಅವರನ್ನು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. 

ವಿಧಾನಸಭೆಯಲ್ಲಿ ಫೆಬ್ರುವರಿ 5ರಂದು ನಡೆದಿದ್ದ ವಿಶ್ವಾಸಮತ ಯಾಚನೆ ವೇಳೆ ಭಾಗವಹಿಸಲು ಸೊರೇನ್‌ ಅವರಿಗೆ ಈ ಹಿಂದೆ ನ್ಯಾಯಾಲಯ ಅವಕಾಶ ನೀಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT