ನವದೆಹಲಿ: 2017ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗಳ ಚಟುವಟಿಕೆಗಳಿಗೆ ಸಂಬಂಧಿಸಿದಂತೆಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್ ಮುಖ್ಯಸ್ಥ ಮೊಹಮ್ಮದ್ ಯಾಸಿನ್ ಮಲಿಕ್ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ದೋಷಾರೋಪಪಟ್ಟಿ ದಾಖಲಿಸಲು ದೆಹಲಿ ನ್ಯಾಯಾಲಯ ಆದೇಶಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳ ಮೂಲಕ ದೇಶದ ವಿರುದ್ಧ ಯುದ್ಧ ಸಾರಿದ ಲಷ್ಕರ್–ಎ–ತೈಯಬಾ ಸಂಸ್ಥಾಪಕ ಹಫೀಜ್ ಸಯೀದ್, ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದಿನ್, ಯಾಸಿನ್ ಮಲಿಕ್, ಶಬ್ಬಿರ್ ಶಾ, ಮಸರತ್ ಅಲಂ ಸೇರಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರ ವಿರುದ್ಧ ಕಠಿಣ ಯುಎಪಿಎ ಮತ್ತು ಐಪಿಸಿ ಸೆಕ್ಷನ್, ಕ್ರಿಮಿನಲ್ ಪಿತೂರಿ ಮತ್ತು ಇತರ ಕಾಯ್ದೆಗಳಡಿ ಆರೋಪ ಹೊರಿಸುವಂತೆ ನ್ಯಾಯಾಲಯ ಹೇಳಿದೆ.

ಪಾಕಿಸ್ತಾನದ ಸಿಯಾಲ್ಕೋಟ್ ಸೇನಾ ನೆಲೆಯಲ್ಲಿ ಭಾರೀ ಸ್ಫೋಟ: ವರದಿ

ಶಬ್ಬಿರ್ ಶಾ, ಯಾಸಿನ್ ಮಲಿಕ್, ರಶೀದ್ ಎಂಜಿನಿಯರ್, ಅಲ್ತಾಫ್ ಫಂಟೂಶ್, ಮಸರತ್ ಹಾಗೂ ಹುರಿಯತ್ ನಾಯಕರು ಭಯೋತ್ಪಾದನೆಗೆ ಹಣ ಪಡೆದಿರುವುದು ಅಲ್ಲದೆ ಪಾಕಿಸ್ತಾನ ಭಯೋತ್ಪಾದನೆಗೆ ಧನಸಹಾಯ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ವಿಶೇಷ ನ್ಯಾಯಾಧೀಶ ಪ್ರವೀಣ್ ಸಿಂಗ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.